ಉಡುಪಿ : ಜಿಲ್ಲೆಯಲ್ಲಿ ಇಂದು 258 ಕೊರೋನಾ ಪ್ರಕರಣ -Vishwanews24

Featured, ಉಡುಪಿ

ಉಡುಪಿ : ಜಿಲ್ಲೆಯಲ್ಲಿ ಇಂದು 258 ಕೊರೋನಾ ಪ್ರಕರಣ -Vishwanews24

ಉಡುಪಿ: ಉಡುಪಿ ಜಿಲ್ಲೆಯಲ್ಲಿ ಬುಧವಾರ ಒಟ್ಟು 258 ಮಂದಿಗೆ ಕೊರೋನಾ ಪಾಸಿಟಿವ್ ದೃಢಗೊಂಡಿದೆ. ಈ ಮೂಲಕ ಜಿಲ್ಲೆಯಲ್ಲಿಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 13345 ಕ್ಕೆ ಏರಿಕೆಯಾಗಿದೆ.

ಸೋಂಕಿತರಲ್ಲಿ ಉಡುಪಿಯ 162, ಕುಂದಾಪುರದ 39, ಕಾರ್ಕಳದ 41 ಹಾಗೂ ಇತರೆ ಜಿಲ್ಲೆಗಳ 16 ರೋಗಿಗಳು ಇದ್ದಾರೆ. 144 ಸೋಂಕಿತರಿಗೆ ರೋಗದ ಗುಣಲಕ್ಷಣಗಳು ಕಂಡುಬಂದರೆ 114 ಮಂದಿಗೆ ಲಕ್ಷಣಗಳು ಇಲ್ಲ.

ಬುಧವಾರ 1000 ವರದಿಗಳು ನೆಗೆಟಿವ್ ಬಂದಿದ್ದು, 258 ಪಾಸಿಟಿವ್ ಬಂದಿವೆ. 368 ವರದಿಗಳು ಬರುವುದು ಬಾಕಿ ಇದೆ.

ಜಿಲ್ಲೆಯಲ್ಲಿ ಬುಧವಾರ 218 ಮಂದಿ ಗುಣಮುಖರಾಗಿದ್ದು ಇದುವರೆಗೂ 11342 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸದ್ಯ 1884 ಸಕ್ರಿಯ ಪ್ರಕರಣಗಳು ಬಾಕಿ ಇವೆ. ಜಿಲ್ಲೆಯಲ್ಲಿ ಬುಧವಾರ 1 ಮಂದಿ ಕೊರೊನಾದಿಂದ ಸಾವನಪ್ಪಿದ್ದು, ಇದುವರೆಗೆ ಕೊರೋನಾದಿಂದ ಒಟ್ಟು 122 ಮಂದಿ ಸಾವನಪ್ಪಿದ್ದಾರೆ.