ಉಡುಪಿ:  ಜ. 29 ರಂದು ನೇರ ಸಂದರ್ಶನ – vishwanews24

Featured, ಉಡುಪಿ

ಉಡುಪಿ:  ಜ. 29 ರಂದು ನೇರ ಸಂದರ್ಶನ

ಉಡುಪಿ: ಜನವರಿ 29 ರಂದು ಬೆಳಗ್ಗೆ 10.30 ಕ್ಕೆ ನಗರದ ಕಿನ್ನಿಮೂಲ್ಕಿಯ ಎ ಟು ಝಡ್ ಕಾರ್ ಆಕ್ಸೆಸ್ಸರೀಸ್ ಸರ್ವೀಸ್ ಬಳಿಯ ರಿಲಯನ್ಸ್ ಜಿಯೋ ಇನ್ಫೋಟೆಕ್ ಇಲ್ಲಿ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನವನ್ನು ಆಯೋಜಿಸಲಾಗಿದೆ.

ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ ಮತ್ತು ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ಪ್ರತಿಯೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ದೂರವಾಣಿ ಸಂಖ್ಯೆ, 8105618291, 9945856670, 8105774936 ಹಾಗೂ 9901472710 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

ಉಡುಪಿ: ಕಲ್ಸಂಕ ಜಂಕ್ಷನ್‌ಗೆ ಅಡ್ಡಲಾಗಿ ಹಾಕಲಾಗಿದ್ದ ಬ್ಯಾರಿಕೇಡ್‌ ತೆರವು ; ಹಳೆ ವ್ಯವಸ್ಥೆಗೆ ಸಂಚಾರ ಆರಂಭ – vishwanews24

Leave a Reply