ಉಡುಪಿ ನಗರಸಭೆ ವ್ಯಾಪ್ತಿಯ ಮೂಲ ಸೌಕರ್ಯ ಅಭಿವೃದ್ಧಿಗೆ ರೂ. 30 ಕೋಟಿ ಅನುದಾನ ಮಂಜೂರು ಮಾಡುವಂತೆ  ಶಾಸಕ ಯಶ್ ಪಾಲ್ ಮನವಿ – vishwanews24

Featured, ಉಡುಪಿ

ಉಡುಪಿ ನಗರಸಭೆ ಮೂಲ ಸೌಕರ್ಯ ಅಭಿವೃದ್ಧಿಗೆ ರೂ. 30 ಕೋಟಿ ವಿಶೇಷ ಅನುದಾನ ಮಂಜೂರು ಮಾಡುವಂತೆ ನಗರಾಭಿವೃದ್ಧಿ ಸಚಿವ ಯತೀಂದ್ರ ಸಿದ್ದರಾಮಯ್ಯ ಅವರಿಗೆ ಶಾಸಕ ಯಶ್ ಪಾಲ್ ಸುವರ್ಣ ಮನವಿ

ಉಡುಪಿ: ನಗರಸಭೆ ವ್ಯಾಪ್ತಿಯಲ್ಲಿ ಅಗತ್ಯ ಮೂಲ ಸೌಕರ್ಯಗಳ ಅಭಿವೃದ್ಧಿಗೆ ರೂ. 30 ಕೋಟಿ ವಿಶೇಷ ಅನುದಾನ ಮಂಜೂರು ಮಾಡುವಂತೆ ನಗರಾಭಿವೃದ್ಧಿ ಸಚಿವ ಯತೀಂದ್ರ ಸಿದ್ದರಾಮಯ್ಯ ರವರನ್ನು ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಭೇಟಿ ಮಾಡಿ ಮನವಿ ಮಾಡಿದರು.

ಜಿಲ್ಲಾ ಕೇಂದ್ರವಾಗಿರುವ ಉಡುಪಿ ನಗರವು ಶೈಕ್ಷಣಿಕ, ಧಾರ್ಮಿಕ, ವೈದ್ಯಕೀಯ, ಬ್ಯಾಂಕಿಂಗ್ ಹಾಗೂ ಪ್ರವಾಸೋದ್ಯಮ ಕ್ಷೇತ್ರಗಳಲ್ಲಿ ಪ್ರಮುಖ ಸ್ಥಾನ ಹೊಂದಿದ್ದು, ವೇಗವಾಗಿ ಬೆಳೆಯುತ್ತಿರುವ ಹಿನ್ನೆಲೆಯಲ್ಲಿ ಮೂಲಭೂತ ಸೌಕರ್ಯಗಳ ಮೇಲಿನ ಒತ್ತಡ ಹೆಚ್ಚಾಗಿದೆ.

ಮಂಗಳೂರು: ಮುಂದಿನ ಏಷ್ಯನ್ ಗೇಮ್ಸ್‌ನಲ್ಲಿ ಉತ್ತಮ ಪ್ರದರ್ಶನ ನೀಡಿ ಚಿನ್ನ ಗೆಲ್ಲುವೆ : ಪೂವಮ್ಮ – vishwanews24

ನಗರಸಭಾ ವ್ಯಾಪ್ತಿಯ ವಿವಿಧ ವಾರ್ಡ್‌ಗಳಲ್ಲಿ ರಸ್ತೆ ನಿರ್ಮಾಣ ಮತ್ತು ಅಭಿವೃದ್ಧಿ, ರಸ್ತೆ ನಿರ್ವಹಣೆ, ಚರಂಡಿ ಹಾಗೂ ಮಳೆನೀರು ಹರಿಯುವ ವ್ಯವಸ್ಥೆ, ಕಾಲುಸಂಕ, ತಡೆಗೋಡೆ, ದಾರಿದೀಪ ಸೇರಿದಂತೆ ಹಲವು ಮೂಲಭೂತ ಸೌಕರ್ಯಗಳ ಅಗತ್ಯವಿದೆ. ವಿಶೇಷವಾಗಿ ಮಳೆಗಾಲದಲ್ಲಿ ಮಳೆನೀರು ಸರಾಗವಾಗಿ ಹರಿದುಹೋಗುವಂತೆ ಚರಂಡಿ ವ್ಯವಸ್ಥೆಯನ್ನು ಬಲಪಡಿಸುವುದು ಹಾಗೂ ಅಗತ್ಯವಿರುವ ಪ್ರದೇಶಗಳಲ್ಲಿ ತಡೆಗೋಡೆ ಮತ್ತು ಕಾಲುಸಂಕಗಳನ್ನು ನಿರ್ಮಿಸುವುದು ಸಾರ್ವಜನಿಕರ ಸುರಕ್ಷತೆ ಮತ್ತು ಸುಗಮ ಸಂಚಾರದ ದೃಷ್ಟಿಯಿಂದ ಅವಶ್ಯಕವಾಗಿದೆ.

ಉಡುಪಿ ನಗರವು ದಿನದಿಂದ ದಿನಕ್ಕೆ ಬೆಳೆಯುತ್ತಿದ್ದು, ಜನಸಂಖ್ಯೆ ಮತ್ತು ನಗರೀಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸೀಮಿತ ಅನುದಾನದಲ್ಲಿ ಎಲ್ಲಾ ಅಗತ್ಯ ಕಾಮಗಾರಿಗಳನ್ನು ಕೈಗೊಳ್ಳುವುದು ಕಷ್ಟಕರವಾಗಿದೆ. ಸಾರ್ವಜನಿಕರಿಂದಲೂ ವಿವಿಧ ಪ್ರದೇಶಗಳ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ನಿರಂತರವಾಗಿ ಬೇಡಿಕೆಗಳು ಬರುತ್ತಿರುವುದರಿಂದ, ನಗರದ ಅಗತ್ಯತೆಗಳನ್ನು ಆದ್ಯತೆಯ ಆಧಾರದ ಮೇಲೆ ಪರಿಹರಿಸಲು ವಿಶೇಷ ಅನುದಾನದ ಅಗತ್ಯವಿದೆ ಎಂದು ಅವರು ಮನವಿಯಲ್ಲಿ ತಿಳಿಸಿದ್ದಾರೆ.

ಉಡುಪಿ : ಯಕ್ಷಗಾನವನ್ನು ‘ಕರ್ನಾಟಕ ರಾಜ್ಯ ಕಲೆ’ ಎಂದು ಘೋಷಿಸಿ : ಮುಖ್ಯಮಂತ್ರಿಗಳಿಗೆ ಕರ್ನಾಟಕ ಯಕ್ಷಗಾನ ಅಕಾಡೆಮಿ ಮನವಿ – vishwanews24

ಈ ಹಿನ್ನೆಲೆಯಲ್ಲಿ ಉಡುಪಿ ನಗರಸಭಾ ವ್ಯಾಪ್ತಿಯ ವಿವಿಧ ಮೂಲಭೂತ ಸೌಕರ್ಯಗಳ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲು ಕನಿಷ್ಠ ರೂ.30 ಕೋಟಿ ವಿಶೇಷ ಅನುದಾನವನ್ನು ತುರ್ತಾಗಿ ಮಂಜೂರು ಮಾಡಿ, ಉಡುಪಿ ನಗರದ ಮೂಲಸೌಕರ್ಯವನ್ನು ಬಲಪಡಿಸಲು ಕ್ರಮ ಕೈಗೊಳ್ಳುವಂತೆ ಶಾಸಕ ಯಶ್ ಪಾಲ್ ಸುವರ್ಣ ನಗರಾಭಿವೃದ್ಧಿ ಸಚಿವರಿಗೆ ಮನವಿ ಮಾಡಿದರು.

Leave a Reply