ಉಡುಪಿ : ನಾಳೆ (ಸೆ.29 ರಂದು ಬುಧವಾರ) ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ಗಾಂಧಿ ಜಯಂತಿ ಪ್ರಯುಕ್ತ “ಖಾದಿ ಮೇಳ” -Vishwanews24
ಉಡುಪಿ : ನಾಳೆ (ಸೆ.29 ರಂದು ಬುಧವಾರ) ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ಗಾಂಧಿ ಜಯಂತಿ ಪ್ರಯುಕ್ತ “ಖಾದಿ ಮೇಳ” -Vishwanews24
ಉಡುಪಿ : ಜಿಲ್ಲಾ ಬಿಜೆಪಿ ಆಶ್ರಯದಲ್ಲಿ ‘ಸೇವೆ ಮತ್ತು ಸಮರ್ಪಣ ಅಭಿಯಾನ’ದ ಅಂಗವಾಗಿ ಅ. 2 ರಂದು ನಡೆಯಲಿರುವ ಗಾಂಧಿ ಜಯಂತಿ ಆಚರಣೆಯ ಪ್ರಯುಕ್ತ ಖಾದಿ ಉತ್ಪನ್ನಗಳಿಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ನಾಳೆ (ಸೆ.29 ಬುಧವಾರ) ಬೆಳಿಗ್ಗೆ 9.30 ರಿಂದ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ಖಾದಿ ಮತ್ತು ಗ್ರಾಮೋದ್ಯೋಗ ಸಂಘ, ಉಡುಪಿ ಇದರ ಸಹಯೋಗದೊಂದಿಗೆ ‘ಖಾದಿ ಮೇಳ’ ನಡೆಯಲಿದೆ. ಈ ಖಾದಿ ಮೇಳದಲ್ಲಿ ಖಾದಿ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ನಡೆಯಲಿದ್ದು, ಬಿಜೆಪಿ ಜಿಲ್ಲಾಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್ ಅವರು ಖಾದಿ ಮೇಳಕ್ಕೆ ಚಾಲನೆ ನೀಡಲಿದ್ದಾರೆ ಎಂದು ಉಡುಪಿ ಜಿಲ್ಲಾ ಬಿಜೆಪಿ ಪ್ರಕಟಣೆ ತಿಳಿಸಿದೆ.
