ಉಡುಪಿ: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ – Vishwanews24
ಉಡುಪಿ: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ
ಉಡುಪಿ : ನಗರ ಪೋಲಿಸ್ ಠಾಣೆಯ ವ್ಯಾಪ್ತಿಯ ಕೆಮ್ತೂರು ವಿಷ್ಣುಮೂರ್ತಿ ದೇವಸ್ಥಾನದ ಸಮೀಪದ ಮನೆಯೊಂದರಲ್ಲಿ ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಬೆಳಿಗ್ಗೆ ನಡೆದಿದೆ.
ಅಶೋಕ್ ನಾಯ್ಕ (34) ಆತ್ಮಹತ್ಯೆ ಮಾಡಿಕೊಂಡವರು.
ಆನೆಗುಡ್ಡೆ ಶ್ರೀವಿನಾಯಕ ದೇವಸ್ಥಾನಕ್ಕೆ ರಿಷಬ್ ಶೆಟ್ಟಿ ದಂಪತಿ ಭೇಟಿ – Vishwanews24
ಮನೆಯಲ್ಲಿ ನೇಣುಕುಣಿಕೆಯಲ್ಲಿ ನೇಲುತ್ತಿದ್ದ ಅಶೋಕ್ ಅವರನ್ನು ತಕ್ಷಣ ಕುಣಿಕೆಯಿಂದ ಇಳಿಸಿ ಸಮಾಜಸೇವಕ ನಿತ್ಯಾನಂದ ಒಳಕಾಡು ಅವರ ಸಹಕಾರದೊಂದಿಗೆ ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಆಸ್ಪತ್ರೆಯಲ್ಲಿ ಅವರನ್ನು ಪರೀಕ್ಷಿಸಿದ ವೈದ್ಯರು ಅಶೋಕ್ ಅವರು ಅದಾಗಲೇ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.
ಈ ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಈ ಬಗ್ಗೆ ನಗರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬ್ರಹ್ಮಾವರ: ಅಪರಿಚಿತ ವಾಹನ ಡಿಕ್ಕಿ – ಬೈಕ್ ಸವಾರ ಸಾವು :- Vishwanews24
