ಉಡುಪಿ : ನ.11 ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ರೂ. 25 ಲಕ್ಷದ ಪ್ರತಿಭಾ ಪುರಸ್ಕಾರ, ಬಹುಮಾನ ವಿತರಣೆ, ಸನ್ಮಾನ : ಯಶ್‍ಪಾಲ್ ಸುವರ್ಣ -Vishwanews24

Featured, ಉಡುಪಿ

ನ.11 ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ರೂ. 25 ಲಕ್ಷದ ಪ್ರತಿಭಾ ಪುರಸ್ಕಾರ, ಬಹುಮಾನ ವಿತರಣೆ, ಸನ್ಮಾನ : ಯಶ್‍ಪಾಲ್ ಸುವರ್ಣ

ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ  ದೈವ ನರ್ತಕ ಗುಡ್ಡ ಪಾಣಾರ ರವರಿಗೆ ಸನ್ಮಾನ ಕಾರ್ಯಕ್ರಮ

ಉಡುಪಿ: ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ಉಡುಪಿ ಇದರ ವತಿಯಿಂದ 12,00 ಮಂದಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ವಿತರಣೆ, ಉಚ್ಚಿಲ ದಸರಾ ಮಹೋತ್ಸವದ ಅಂಗವಾಗಿ ಆಯೋಜಿಸಿದ್ದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಮಟ್ಟದ ಚಿತ್ರ ಬಿಡಿಸುವ ಸ್ಪರ್ಧೆಯ ಬಹುಮಾನ ವಿತರಣೆ ಹಾಗೂ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕøತ ದೈವ ನರ್ತಕ ಗುಡ್ಡ ಪಾಣಾರ ರವರಿಗೆ ಸನ್ಮಾನ ಕಾರ್ಯಕ್ರಮ ಉಡುಪಿಯ ಪುರಭವನದಲ್ಲಿ ನವೆಂಬರ್ 11 ಶುಕ್ರವಾರಬೆಳಿಗ್ಗೆ 10.30ಕ್ಕೆ ಆಯೋಜಿಸಿರುವುದಾಗಿ ಬ್ಯಾಂಕಿನ ಅಧ್ಯಕ್ಷರಾದ ಯಶ್ ಪಾಲ್ ಎ. ಸುವರ್ಣ ತಿಳಿಸಿದ್ದಾರೆ.

ಬ್ಯಾಂಕಿನ ಅಧ್ಯಕ್ಷರಾದ ಯಶ್‍ಪಾಲ್ ಸುವರ್ಣ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದು , ಸಮಾರಂಭವನ್ನು ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್‍ನ ಪ್ರವರ್ತಕರಾದ ನಾಡೋಜ ಡಾ| ಜಿ. ಶಂಕರ್ ಉದ್ಘಾಟಿಸಲಿದ್ದಾರೆ. ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಹಾಕೇ ಮಚ್ಚಿಂದ್ರ ಪ್ರತಿಭಾ ಪುರಸ್ಕಾರ ನೆರವೇರಿಸಲಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷರಾದ ಸಹಕಾರ ರತ್ನ ಡಾ| ಎಂ. ಎನ್. ರಾಜೇಂದ್ರ ಕುಮಾರ್ ಚಿತ್ರ ಬಿಡಿಸುವ ಸ್ಪರ್ಧೆಯ ಬಹುಮಾನ ವಿತರಿಸಲಿದ್ದಾರೆ.

ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಅಧ್ಯಕ್ಷರಾದ ಶ್ರೀ ಜಯ ಸಿ. ಕೋಟ್ಯಾನ್, ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷರಾದ ಶ್ರೀ ಜಯಕರ ಶೆಟ್ಟಿ ಇಂದ್ರಾಳಿ, ಡಾ| ಜಿ. ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಪ್ರಾಂಶುಪಾಲರಾದ ಡಾ| ಭಾಸ್ಕರ್ ಶೆಟ್ಟಿ ಎಸ್., ಉಜ್ವಲ್ ಸಮೂಹ ಸಂಸ್ಥೆಗಳ ಆಡಳಿತ ನಿರ್ದೇಶಕರಾದ ಶ್ರೀ ಅಜಯ್ ಪಿ. ಶೆಟ್ಟ ಉಪಸ್ಥಿತರಿರಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply