ಉಡುಪಿ: ನ.8ರಂದು ಶ್ರೀ ಕನಕದಾಸರ 538ನೇ ಜಯಂತಿ‌ ಮಹೋತ್ಸವ ಹಾಗೂ 351 ಕುಂಭ ಕಲಶ ಮೆರವಣಿಗೆ – vishwanews24

Featured, ಉಡುಪಿ

ಉಡುಪಿ: ನ.8ರಂದು ಶ್ರೀ ಕನಕದಾಸರ 538ನೇ ಜಯಂತಿ‌ ಮಹೋತ್ಸವ ಹಾಗೂ 351 ಕುಂಭ ಕಲಶ ಮೆರವಣಿಗೆ

ಉಡುಪಿ: ಉಡುಪಿ ಜಿಲ್ಲಾ ಶ್ರೀ ಕನಕದಾಸ ಸಮಾಜ ಸೇವಾ ಸಂಘ ಹಾಗೂ ಪರ್ಯಾಯ ಶ್ರೀ ಪುತ್ತಿಗೆ ಮಠ ಉಡುಪಿ ಕೃಷ್ಣಮಠದ ಸಂಯುಕ್ತ ಆಶ್ರಯದಲ್ಲಿ ಶ್ರೀ ಕನಕದಾಸರ 538ನೇ ಜಯಂತಿ‌ ಮಹೋತ್ಸವ ಹಾಗೂ 351 ಕುಂಭ ಕಲಶ ಮೆರವಣಿಗೆ ನ.8ರಂದು ಉಡುಪಿಯಲ್ಲಿ ನಡೆಯಲಿದೆ ಎಂದು ಉಡುಪಿ ಜಿಲ್ಲಾ ಶ್ರೀ ಕನಕದಾಸ ಸಮಾಜ ಸೇವಾ ಸಂಘದ ಗೌರವಾಧ್ಯಕ್ಷ ಸಿದ್ದರಾಜು ಕೆ.ಎಸ್. ತಿಳಿಸಿದರು.

ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಅಂದು ಬೆಳಿಗ್ಗೆ 10ಗಂಟೆಗೆ ಉಡುಪಿ ಅಜ್ಜರಕಾಡಿನ ಭುಜಂಗ್ ಪಾರ್ಕ್ ನಲ್ಲಿ ಕನಕದಾಸರ ಜಯಂತಿ ನಡೆಯಲಿದೆ. ಬೆಳಿಗ್ಗೆ 11ಗಂಟೆಗೆ ಉಡುಪಿ ಜೋಡುಕಟ್ಟೆಯಲ್ಲಿ ಕುಂಭ ಕಲಶ ಮೆರವಣಿಗೆಗೆ ಕರ್ನಾಟಕ ಪ್ರದೇಶ ಕುರುಬರ ಸಂಘದ ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ಪ್ರಭಾವತಿ ಕೆ.ಆರ್ ಚಾಲನೆ ನೀಡಲಿದ್ದಾರೆ. ಬಳಿಕ ಮೆರವಣಿಗೆ ಜೋಡುಕಟ್ಟೆಯಿಂದ ಶ್ರೀಕೃಷ್ಣಮಠದ ಕನಕದಾಸ ಮಂದಿರದವರೆಗೆ ಸಾಗಿಬರಲಿದೆ ಎಂದರು.

ಮಂಗಳೂರು: ಕದ್ರಿ ಪಾರ್ಕ್‌ಗೆ ಬರಬೇಕಾದ್ರೆ ಕಟ್ಟಬೇಕು ಟೋಲ್ ; ಸ್ಮಾರ್ಟ್ ಸಿಟಿ ಯೋಜನೆ ವಿರುದ್ಧ ಸಾರ್ವಜನಿಕರ ಭಾರೀ ವಿರೋಧ – vishwanews24

ಮಧ್ಯಾಹ್ನ 1 ಗಂಟೆಗೆ ಕನಕದಾಸರ ಮೂರ್ತಿಗೆ ಪರ್ಯಾಯ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ವಿಶೇಷ ಪೂಜೆ ಸಲ್ಲಿಸಲಿದ್ದಾರೆ. ಆ ಬಳಿಕ ಮಧ್ಯಾಹ್ನ 1.30ಕ್ಕೆ ರಾಜಾಂಗಣದಲ್ಲಿ ನಡೆಯುವ ಸಭಾಕಾರ್ಯಕ್ರಮದಲ್ಲಿ ಪುತ್ತಿಗೆ ಶ್ರೀಪಾದರು ಆಶೀರ್ವಚನ ನೀಡಲಿದ್ದಾರೆ. ಶಾಸಕ ಯಶ್ ಪಾಲ್ ಸುವರ್ಣ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಉಡುಪಿ ಜಿಲ್ಲಾ ಶ್ರೀ ಕನಕದಾಸ ಸಮಾಜ ಸೇವಾ ಸಂಘದ ಹನುಮಂತ ಎಸ್. ಡೊಳ್ಳಿನ ಅಧ್ಯಕ್ಷತೆ ವಹಿಸಲಿದ್ದಾರೆ.

ಈ ಸಂದರ್ಭದಲ್ಲಿ ಉದ್ಯಮಿ ಕೆ. ಕೃಷ್ಣಮೂರ್ತಿ ಆಚಾರ್ಯ ಅವರಿಗೆ ಭಕ್ತ ಕನಕ ಪುರಸ್ಕಾರ ಪ್ರದಾನ ಮಾಡಲಾಗುವುದು ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಸಂಘದ ಅಧ್ಯಕ್ಷ ಹನುಮಂತ ಎಸ್. ಡೊಳ್ಳಿನ, ಪ್ರಧಾನ ಕಾರ್ಯದರ್ಶಿ ಸಂಗಮೇಶ ಬ. ಆಸಂಗಿ, ಜೊತೆ ಕಾರ್ಯದರ್ಶಿ ದೇವು ಎಸ್. ಪೂಜಾರ, ಬ್ರಹ್ಮಾವರ ತಾಲೂಕು ಅಧ್ಯಕ್ಷ ಮಹಾಂತೇಶ್ ಕಾಟಾಪುರ, ಸಲಹೆಗಾರರಾದ ಮುತ್ತಪ್ಪ ಕುರಿ, ಬಸವರಾಜ ಕುರುಬ ಉಪಸ್ಥಿತರಿದ್ದರು.

ಹಾಸ್ಟೆಲ್‌ ಟೆರೇಸ್‌ ಮೇಲೆ ನೇಣು ಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿನಿ ಮೃತದೇಹ ಪತ್ತೆ – vishwanews24

Leave a Reply