ಉಡುಪಿ : ಪಡಿತರ ಚೀಟಿಗೆ ಇ-ಕೆವೈಸಿ : ನಿಯಮ ಸಡಿಲಿಕೆ – Vishwanews24

Featured, ಉಡುಪಿ

ಉಡುಪಿ : ಪಡಿತರ ಚೀಟಿಗೆ ಇ-ಕೆವೈಸಿ : ನಿಯಮ ಸಡಿಲಿಕೆ – Vishwanews24

ಉಡುಪಿ: ರಾಜ್ಯದ ಯಾವುದೇ ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ಚೀಟಿದಾರರಿಗೆ ಪೋರ್ಟಿಬಿಲಿಟಿ ಮೂಲಕ ಜೂನ್ 30 ರ ಒಳಗೆ ಇ-ಕೆವೈಸಿ ಮಾಡಿಸಲು ಅಂತಿಮ ಅವಕಾಶ ಕಲ್ಪಿಸಲಾಗಿದೆ.

ಕುಟುಂಬದ ಎಲ್ಲಾ ಸದಸ್ಯರು ಇ-ಕೆವೈಸಿ ಮಾಡಿಸುವುದು ಕಡ್ಡಾಯವಾಗಿದ್ದು, ಈವರೆಗೆ ಪಡಿತರ ಆಹಾರಧಾನ್ಯ ಪಡೆಯುತ್ತಿದ್ದ ಮೂಲ ನ್ಯಾಯಬೆಲೆ ಅಂಗಡಿಗಳಲ್ಲಿ ಮಾತ್ರ ಇ-ಕೆವೈಸಿ ಮಾಡಲು ಇದ್ದ ನಿಯಮವನ್ನು ಸಡಿಲಗೊಳಿಸಲಾಗಿದ್ದು, ಇದುವರೆಗೂ ಇ-ಕೆವೈಸಿ ಆಗದೇ ಇರುವ ಪಡಿತರ ಚೀಟಿಯ ಸದಸ್ಯರು ರಾಜ್ಯದ ಯಾವುದೇ ನ್ಯಾಯಬೆಲೆ ಅಂಗಡಿಯಲ್ಲಿ ತಮ್ಮ ಬೆರಳಚ್ಚು ನೊಂದಾಯಿಸಿಕೊಳ್ಳಬಹುದಾಗಿದೆ (ಆಧಾರ ದೃಢೀಕರಣ ಇ-ಕೆವೈಸಿ).

ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಸೇರಿದ ಪಡಿತರ ಚೀಟಿದಾರರು ಜಾತಿ ಪ್ರಮಾಣ ಪತ್ರ ಹಾಗೂ ಅನಿಲ ಸಂಪರ್ಕ ಹೊಂದಿರುವ ಪಡಿತರ ಚೀಟಿದಾರರು, ಅನಿಲ ಸಂಪರ್ಕದ ಮಾಹಿತಿ ಮತ್ತು ಮೊಬೈಲ್ ಸಂಖ್ಯೆಯನ್ನು ಇ-ಕೆವೈಸಿ ಮಾಡುವ ನ್ಯಾಯಬೆಲೆ ಅಂಗಡಿಗಳಿಗೆ ನೀಡಬೇಕು.

ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಉಡುಪಿ, ಕಾರ್ಕಳ ಹಾಗೂ ಕುಂದಾಪುರ ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿ ಅಥವಾ ಮೀನುಗಾರಿಕೆ ಇಲಾಖೆಯ ಉಪನಿರ್ದೇಶಕರನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಯುವ ಪರಿವರ್ತಕರ ಹುದ್ದೆ: ಅರ್ಜಿ ಆಹ್ವಾನ – Vishwanews24

Leave a Reply