ಉಡುಪಿ:  ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ – vishwanews24

Featured, ಉಡುಪಿ

ಉಡುಪಿ:  ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ

   ಉಡುಪಿ: ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ ನ್ಯಾಯಬೆಲೆ ಅಂಗಡಿಗಳಿAದ ಪಡಿತರ ಪಡೆಯುತ್ತಿರುವ ಆದ್ಯತಾ (ಬಿಪಿಎಲ್) ಮತ್ತು ಅಂತ್ಯೋದಯ (ಎಎವೈ) ಪಡಿತರ ಚೀಟಿಯಲ್ಲಿರುವ ಅರ್ಹ ಫಲಾನುಭವಿಗಳು, ಈ ಹಿಂದೆ ಇ–ಕೆವೈಸಿ ಮಾಡಿಸಿ 5 ವರ್ಷಗಳು ಪೂರ್ಣಗೊಂಡಿರುವ ಪಡಿತರ ಚೀಟಿದಾರರು ಕಡ್ಡಾಯವಾಗಿ ಇ–ಕೆವೈಸಿ ಮಾಡಿಸಿಕೊಳ್ಳಬೇಕಾಗಿದ್ದು, ಈ ಪ್ರಕ್ರಿಯೆ ಪೂರ್ಣಗೊಳಿಸಲು ಸರ್ಕಾರವು ಪ್ರಸ್ತುತ ಅಕ್ಟೋಬರ್ 20 ರ ವರೆಗೆ ಕಾಲಾವಕಾಶವನ್ನು ವಿಸ್ತರಿಸಿ ಆದೇಶಿಸಿರುತ್ತದೆ.

 ಈ ಹಿಂದೆ ಸೆಪ್ಟಂಬರ್ 30 ನ್ನು ಕೊನೆಯ ದಿನವಾಗಿ ನಿಗದಿಗೊಳಿಸಲಾಗಿದ್ದು, ಈ ಕುರಿತಾಗಿ ಪತ್ರಿಕೆಯ ಮೂಲಕ ಮತ್ತು ನ್ಯಾಯಬೆಲೆ ಅಂಗಡಿಯವರ ಮೂಲಕ ಪಡಿತರ ಚೀಟಿದಾರರಿಗೆ ಮಾಹಿತಿಯನ್ನು ನೀಡಲಾಗಿರುತ್ತದೆ. ಆದರೆ, ಈಗ ಸರ್ಕಾರದಿಂದ ಪ್ರಸ್ತುತ ಅಕ್ಟೋಬರ್ 20 ರ ವರೆಗೆ ಇ–ಕೆವೈಸಿ ಮಾಡಲು ಕಾಲಾವಕಾಶವನ್ನು ವಿಸ್ತರಿಸಲಾಗಿದ್ದು, ನಿಗದಿತ ಅವಧಿಯೊಳಗೆ ಇ–ಕೆವೈಸಿ ಮಾಡಿಸಿಕೊಳ್ಳದ ಪಡಿತರ ಚೀಟಿದಾರರಿಗೆ ಮುಂದಿನ ದಿನಗಳಲ್ಲಿ ಪಡಿತರ ವಿತರಣೆಯಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆ ಇರುವುದರಿಂದ ಇದುವರೆಗೂ ಇ–ಕೆವೈಸಿ ಮಾಡಿಸದೇ ಇರುವ ಅರ್ಹ ಫಲಾನುಭವಿಗಳು ಕೂಡಲೇ ಸದ್ರಿ ಪ್ರಕ್ರಿಯೆ ಪೂರ್ಣಗೊಳಿಸಬೇಕು.  

 ಇ–ಕೆವೈಸಿ ಮಾಡಿಸಿಕೊಳ್ಳಲು ಬಾಕಿಯಿರುವ ಪಡಿತರ ಚೀಟಿದಾರರ ಪಟ್ಟಿಯನ್ನು ಜಿಲ್ಲೆಯ ಎಲ್ಲಾ ತಾಲೂಕುಗಳ ನ್ಯಾಯಬೆಲೆ ಅಂಗಡಿಯವರಿಗೆ ನೀಡಲಾಗಿದೆ. ಸದರಿ ಪಟ್ಟಿಯನ್ನು ಪರಿಶೀಲಿಸಿಕೊಂಡು, ಬಾಕಿ ಉಳಿದಿರುವ ಫಲಾನುಭವಿಗಳು ಯಾವುದೇ ಕಾರಣಕ್ಕೂ ವಿಳಂಬ ಮಾಡದಂತೆ ಇ–ಕೆವೈಸಿ ಮಾಡಿಸಿಕೊಳ್ಳಬೇಕು. ವಿಶೇಷವಾಗಿ ಕಳೆದ ಹಲವು ವರ್ಷಗಳಿಂದ ಗ್ರಾಮದಲ್ಲಿ ವಾಸವಿಲ್ಲದೆ ಬೇರೆಡೆಗೆ ವಲಸೆ ಹೋಗಿರುವ ಅಥವಾ ಊರು ಬಿಟ್ಟು ತೆರಳಿರುವ ಪಡಿತರ ಚೀಟಿದಾರರು ಸಹ ತಮ್ಮ ಇ–ಕೆವೈಸಿ ಸ್ಥಿತಿಯನ್ನು ನ್ಯಾಯಬೆಲೆ ಅಂಗಡಿಯಲ್ಲಿ ಪರಿಶೀಲಿಸಿಕೊಂಡು ಇ–ಕೆವೈಸಿ ಮಾಡಿಸಿಕೊಳ್ಳಬಹುದಾಗಿದೆ. ಅಲ್ಲದೇ “ಅನ್ನಸೇವಾ” ಆಪ್ ಅನ್ನು ಮೊಬೈಲ್ ನಲ್ಲಿರುವ ಪ್ರೇಸ್ಟೋರ್ ನಿಂದ ಡೌನ್ ಲೋಡ್ ಮಾಡಿಕೊಂಡು ಸಹ ಮನೆಯಲ್ಲಿಯೇ ಇ–ಕೆವೈಸಿಯನ್ನು ಪಡಿತರ ಚೀಟಿದಾರರು ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿರುತ್ತದೆ. 

 ಇ–ಕೆವೈಸಿ ಮಾಡಿಸಲು ಪಡಿತರ ಚೀಟಿದಾರರು ಮೊಬೈಲ್ ಸಂಖ್ಯೆ ಲಿಂಕ್ ಆಗಿರುವ ಆಧಾರ್ ಕಾರ್ಡ್ ಮತ್ತು ಪಡಿತರ ಚೀಟಿಯನ್ನು ತೆಗೆದುಕೊಂಡು ಸಮೀಪದ ನ್ಯಾಯಬೆಲೆ ಅಂಗಡಿಗೆ ತೆರಳಿ ಇ–ಕೆವೈಸಿಯನ್ನು ಮಾಡಿಸಿಕೊಳ್ಳಬಹುದಾಗಿದೆ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ. 

Leave a Reply