ಉಡುಪಿ ಪ್ಯಾರಾ ಮೆಡಿಕಲ್ ಕಾಲೇಜಿನಲ್ಲಿ ನಡೆದ ಘಟನೆಯನ್ನು ಖಂಡಿಸಿ ನಾಳೆ ಕಾಪುವಿನಲ್ಲಿ ಮಹಿಳಾ ಮೋರ್ಚಾ ಬೃಹತ್ ಪ್ರತಿಭಟನೆ: ವೀಣಾ ಶೆಟ್ಟಿ – Vishwanews24
ಉಡುಪಿ ಪ್ಯಾರಾ ಮೆಡಿಕಲ್ ಕಾಲೇಜಿನಲ್ಲಿ ನಡೆದ ಘಟನೆಯನ್ನು ಖಂಡಿಸಿ ನಾಳೆ ಕಾಪುವಿನಲ್ಲಿ ಮಹಿಳಾ ಮೋರ್ಚಾ ಬೃಹತ್ ಪ್ರತಿಭಟನೆ: ವೀಣಾ ಶೆಟ್ಟಿ
ಜುಲೈ 27ರಂದು ಬೆಳಿಗ್ಗೆ 11.00 ಗಂಟೆಗೆ ಕಾಪು ಪೇಟೆಯಲ್ಲಿ ಉಡುಪಿಯ ಪ್ಯಾರಾ ಮೆಡಿಕಲ್ ಕಾಲೇಜಿನಲ್ಲಿ ನಡೆದ ಘಟನೆಯನ್ನು ಖಂಡಿಸಿ ಜಿಲ್ಲಾ ಮಹಿಳಾ ಮೋರ್ಚಾ ಬೃಹತ್ ಪ್ರತಿಭಟನೆ
ಉಡುಪಿಯ ನೇತ್ರ ಜ್ಯೋತಿ ಪ್ಯಾರಾ ಮೆಡಿಕಲ್ ಕಾಲೇಜಿನಲ್ಲಿ ಮೂರು ಮಂದಿ ಮುಸ್ಲಿಂ ವಿದ್ಯಾರ್ಥಿನಿಯರು ಕಾಲೇಜಿನ ಶೌಚಾಲಯದಲ್ಲಿ ಹಿಂದೂ ವಿದ್ಯಾರ್ಥಿನಿಯರ ವೀಡಿಯೋ ಚಿತ್ರೀಕರಿಸಿರುವ ಘಟನೆಯನ್ನು ಖಂಡಿಸಿ, ಪೊಲೀಸ್ ಇಲಾಖೆ ಪ್ರಕರಣದ ತನಿಖೆಯನ್ನು ತೀವ್ರಗೊಳಿಸುವಂತೆ ಒತ್ತಾಯಿಸಿ ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾದ ವತಿಯಿಂದ ನಾಳೆ ಜುಲೈ 27, ಗುರುವಾರ ಬೆಳಿಗ್ಗೆ 11.00 ಗಂಟೆಗೆ ಕಾಪು ಪೇಟೆಯ ಬಸ್ ನಿಲ್ದಾಣದ ಬಳಿ ಬೃಹತ್ ಪ್ರತಿಭಟನೆ ನಡೆಯಲಿದೆ ಎಂದು ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿ ತಿಳಿಸಿದ್ದಾರೆ.
ರಾಜ್ಯ ಸರ್ಕಾರ ಕರ್ನಾಟಕವನ್ನು ಪಾಕಿಸ್ತಾನ ಮಾಡಲು ಹೊರಟಿದೆ: ಯಶ್ಪಾಲ್ ಸುವರ್ಣ – Vishwanews24
ಈ ಪ್ರಮುಖ ಪ್ರತಿಭಟನೆಯಲ್ಲಿ ಪಕ್ಷದ ಪ್ರಮುಖರು, ಬಿಜೆಪಿ ಜಿಲ್ಲಾ, ಮೋರ್ಚಾ, ಪ್ರಕೋಷ್ಠ, ಮಂಡಲ ಸಹಿತ ವಿವಿಧ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಪ್ರತಿಭಟನೆಯನ್ನು ಅತ್ಯಂತ ಯಶಸ್ವಿಗೊಳಿಸಬೇಕು ಎಂದು ಅವರು ಪತ್ರಿಕಾ ಪ್ರಕಟಣೆಯಲ್ಲಿ ಕೋರಿದ್ದಾರೆ.
