ಉಡುಪಿ ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕ ಕೋವಿಡ್ ನಿಂದ ನಿಧನ – Vishwanews 24

Featured, ಉಡುಪಿ

ಉಡುಪಿ ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕ ಕೋವಿಡ್ ನಿಂದ ನಿಧನ – Vishwanews 24

ಉಡುಪಿ: ಉಡುಪಿ ಜಿಲ್ಲೆಯ ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕ ಸೋಮಶೇಖರ್ ಬನವಾಸಿ ಕೋವಿಡ್‌ನಿಂದ ಸೋಮವಾರ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ‌.

ಮೂಲತಃ ಉತ್ತರ ಕನ್ನಡ ಜಿಲ್ಲೆಯ ಬನವಾಸಿಯವರಾದ ಇವರು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕುಟುಂಬದೊಂದಿಗೆ ವಾಸವಿದ್ದರು‌.ಮೃತರಿಗೆ ಪತ್ನಿ, ಇಬ್ಬರು ಪುತ್ರಿಯರು, ಓರ್ವ ಪುತ್ರ ಇದ್ದಾರೆ. 2020 ರ ನ. 24 ರಂದು ಉಡುಪಿ ಸಹಾಯಕ ನಿರ್ದೇಶಕರಾಗಿ ಅಧಿಕಾರ ಸ್ವೀಕರಿಸಿದ್ದರು.

ಪಡುಬಿದ್ರೆ ಬೀಚ್ ಬ್ಲೂ ಪ್ಲಾಗ್ ಅಂತಾರಾಷ್ಟ್ರೀಯ ಮಾನ್ಯತೆ ಸಿಗುವಲ್ಲಿ ಸಾಕಷ್ಟು ಶ್ರಮಿಸಿದ್ದರು.ದಕ್ಷಿಣ ಕನ್ನಡ ಜಿಲ್ಲೆಯ ಪ್ರವಾಸೋದ್ಯಮ ಇಲಾಖೆಯ ಪ್ರಥಮ ದರ್ಜೆ ಸಹಾಯಕರಾಗಿ ಕರ್ತವ್ಯ ನಿರ್ವಹಿಸಿದ್ದ ಇವರು ಸೇವಾ ಮುಂಬಡ್ತಿ ಹೊಂದಿದ್ದರು.ಸರಕಾರಿ ಕೆಲಸಕ್ಕೆ ಸೇರುವ ಮುನ್ನ ಇವರು ಪತ್ರಕರ್ತರಾಗಿ ಸೇವೆ ಸಲ್ಲಿಸಿದ್ದರು.

ಅತ್ಯಂತ ನಿಷ್ಠೆಯ ಸಹೋದ್ಯೋಗಿ ಹಾಗೂ ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕರಾದ ಸೋಮಶೇಖರ್ ಅವರನ್ನು ಕಳೆದುಕೊಂಡು ಹೃದಯ ಭಾರವಾಗಿದೆ ಇವರ ಆತ್ಮಕ್ಕೆ ಭಗವಂತ ಶಾಂತಿಯನ್ನು ಕರುಣಿಸಲಿ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಸಂತಾಪ ಸೂಚಿಸಿದ್ದಾರೆ.