ಉಡುಪಿ: ಭಾಸ್ಕರ್ ಶೆಟ್ಟಿ ಕೊಲೆ ಆರೋಪಿಗಳಿಗೆ ಜಾಮೀನು : ಜೀವಾವಧಿ ಶಿಕ್ಷೆ ಪ್ರಕಟ ಆದವರಿಗೆ ಜಾಮೀನು ಹೇಗೆ ಸಿಕ್ಕಿದೆ? : ತಾಯಿ ಅಸಮಾಧಾನ – Vishwanews24
ಜೀವಾವಧಿ ಶಿಕ್ಷೆಗೆ ಒಳಗಾದವರಿಗೆ 6 ತಿಂಗಳೊಳಗೆ ಜಾಮೀನು ಸಾಧ್ಯನಾ?
ಸುಪ್ರೀಂ ಕೋರ್ಟ್ ಮೂಲಕ ಹೋರಾಟ ನಡೆಸುತ್ತೇವೆ ..
ಹೈಕೋರ್ಟ್ ತೀರ್ಪಿನ ವಿರುದ್ಧ ಭಾಸ್ಕರ್ ಶೆಟ್ಟಿ ತಾಯಿ ಅಸಮಾಧಾನ..
ಉಡುಪಿ: ಹಣ ಇದ್ದವರಿಗೆ ಒಂದು ಕಾನೂನು, ಪಾಪದವರಿಗೆ ಇನ್ನೊಂದು ಕಾನೂನಾ? ಜೀವಾವಧಿ ಶಿಕ್ಷೆ ಪ್ರಕಟ ಆದವರಿಗೆ ಜಾಮೀನು ಹೇಗೆ ಸಿಕ್ಕಿದೆ? ಎಂದು ಕೊಲೆಗೀಡಾದ ಭಾಸ್ಕರ್ ಶೆಟ್ಟಿ ತಾಯಿ ಗುಲಾಬಿ ಶೆಟ್ಟಿ ಅವರು ಮಾಧ್ಯಮದ ಮುಂದೆ ತಮ್ಮ ಅಳಲು ತೋಡಿಕೊಂಡಿದ್ದಾರೆ.
ಭಾಸ್ಕರ್ ಶೆಟ್ಟಿ ಕೊಲೆ ಆರೋಪಿಗಳಿಗೆ ಹೈಕೋರ್ಟ್ ಜಾಮೀನು ನೀಡಿದೆ. ರಾಜೇಶ್ವರಿ ಶೆಟ್ಟಿ, ನವನೀತ್, ನಿರಂಜನ್ ಭಟ್ಗೆ ಜಾಮೀನು ಮಂಜೂರು ಮಾಡಿದೆ. ಜೂನ್ ೮ ೨೦೨೧ರಂದು ಆರೋಪಿಗಳಿಗೆ ಉಡುಪಿ ಕೋರ್ಟ್ ಜೀವಾವಧಿ ಶಿಕ್ಷೆ ಪ್ರಕಟಿಸಿತ್ತು. ಆದರೆ, ಆ ಬಳಿಕ ಆರೋಪಿಗಳು ಹೈಕೋರ್ಟ್ ಕದ ತಟ್ಟಿದ್ದಾರೆ.
ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಹಕಾರಿ ರತ್ನ ಡಾ.ಎಂ ಎನ್ ರಾಜೇಂದ್ರ ಕುಮಾರ್ ಗೆ ಅದ್ದೂರಿ ಸ್ವಾಗತ: vishwanews24
ಹೈಕೋರ್ಟ್ ಮೂಲಕ ಆರೋಪಿಗಳು ಜಾಮೀನು ಪಡೆದುಕೊಂಡಿದ್ದಾರೆ. ಜೀವಾವಧಿ ಶಿಕ್ಷೆಗೆ ಒಳಗಾದವರಿಗೆ ೬ ತಿಂಗಳೊಳಗೆ ಜಾಮೀನು ಸಾಧ್ಯನಾ? ಎಂದು ಹೈಕೋರ್ಟ್ ತೀರ್ಪಿನ ವಿರುದ್ಧ ಭಾಸ್ಕರ್ ಶೆಟ್ಟಿ ತಾಯಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮುಂದಕ್ಕೆ ನಾವು ಸುಪ್ರೀಂ ಕೋರ್ಟ್ ಮೂಲಕ ಹೋರಾಟ ನಡೆಸುತ್ತೇವೆ ಎಂದು ಭಾಸ್ಕರ್ ಶೆಟ್ಟಿ ತಾಯಿ ಗುಲಾಬಿ ಶೆಟ್ಟಿ ಹೇಳಿದ್ದಾರೆ.
ಇದನ್ನೂ ಓದಿ : ಸಮಸ್ಯೆ ಗಳಿಗೆ ಶೀಘ್ರ ಪರಿಹಾರ.. ನೋಡಿ ಇಂದಿನ ದಿನ ಭವಿಷ್ಯ.. ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564
