ಉಡುಪಿ: ಭಾಸ್ಕರ ಶೆಟ್ಟಿ ಕೊಲೆ ಪ್ರಕರಣ : ಪರಪ್ಪನ ಅಗ್ರಹಾರಕ್ಕೆರಾಜೇಶ್ವರಿ ಶೆಟ್ಟಿ ಹಸ್ತಾಂತರ, ಜೈಲಲ್ಲೇ ಕ್ವಾರಂಟೈನ್ – Vishwanews24
ಉಡುಪಿ: ಭಾಸ್ಕರ ಶೆಟ್ಟಿ ಕೊಲೆ ಪ್ರಕರಣ : ಪರಪ್ಪನ ಅಗ್ರಹಾರಕ್ಕೆರಾಜೇಶ್ವರಿ ಶೆಟ್ಟಿ ಹಸ್ತಾಂತರ, ಜೈಲಲ್ಲೇ ಕ್ವಾರಂಟೈನ್ – Vishwanews24
ಉಡುಪಿ,: ಇಂದ್ರಾಳಿಯ ಅನಿವಾಸಿ ಉದ್ಯಮಿ ಭಾಸ್ಕರ ಶೆಟ್ಟಿ ಕೊಲೆ ಪ್ರಕರಣದ ಅಪರಾಧಿಗಳಾದ ಪತ್ನಿ ರಾಜೇಶ್ವರಿ ಶೆಟ್ಟಿ, ಪುತ್ರ ನವನೀತ ಶೆಟ್ಟಿ ಹಾಗೂ ನಂದಳಿಕೆಯ ಜ್ಯೋತಿಷಿ ನಿರಂಜನ ಭಟ್ ಎಂಬಾತನಿಗೆ ಜೂ.8 ರ ಮಂಗಳವಾರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ.
ರಾಜೇಶ್ವರಿ ಪುತ್ರ ನವನೀತ್ ಶೆಟ್ಟಿ, ಗೆಳೆಯ ನಿರಂಜನ್ ಭಟ್ ಈಗಾಗಲೇ ಪರಪ್ಪನ ಅಗ್ರಹಾರದಲ್ಲಿದ್ದಾರೆ. ಮಣಿಪಾಲ ಪೊಲೀಸ್ ಠಾಣೆಯ ಪೊಲೀಸ್ ಸಹಿತ ಬಿಗು ಭದ್ರತೆಯಲ್ಲಿ ರಾಜೇಶ್ವರಿ ಶೆಟ್ಟಿಯನ್ನು ಬೆಂಗಳೂರಿಗೆ ಕರೆದುಕೊಂಡು ಹೋಗಿದ್ದು, ಪರಪ್ಪನ ಅಗ್ರಹಾರಕ್ಕೆ ಹಸ್ತಾಂತರಿಸಲಾಗಿದೆ.
14 ದಿನಗಳ ಕ್ವಾರಂಟೈನ್
ಜಿಲ್ಲಾ ನ್ಯಾಯಾಲಯದ ತೀರ್ಪಿನ ಬಳಿಕ ರಾಜೇಶ್ವರಿ ಶೆಟ್ಟಿಯನ್ನು ಕರೆದು ಕೊಂಡು ಉಡುಪಿ ಅಜ್ಜರಕಾಡು ಜಿಲ್ಲಾಸ್ಪತ್ರೆಯಲ್ಲಿ ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿತ್ತು. ಕೋವಿಡ್ ವರದಿ ನೆಗೆಟಿವ್ ಬಂದಿದ್ದು, ಆ ಬಳಿಕ ಮಣಿಪಾಲ ಪೊಲೀಸರು, ಮಹಿಳಾ ಠಾಣೆಯ ಎಸ್ ಐ, ಸಶಸ್ತ್ರ ಹೊಂದಿರುವ ಸಿಬಂದಿ ಜತೆ ಜಿಲ್ಲಾ ಸಶಸ್ತ್ರ ವಾಹನದಲ್ಲಿ ರಾಜೇಶ್ವರಿ ಶೆಟ್ಟಿಯನ್ನು ಕರೆದುಕೊಂಡು ಹೋಗಲಾಗಿದೆ.
ಮಂಗಳವಾರ ರಾತ್ರಿ 10 ಗಂಟೆ ಸುಮಾರಿಗೆ ಬೆಂಗಳೂರು ತಲುಪಿದ್ದು, ಜೈಲರ್ ಅವರಿಗೆ ಹಸ್ತಾಂತರಿಸಲಾಗಿದೆ. ಜೈಲಿನಲ್ಲಿರುವ ಪ್ರತ್ಯೇಕ ಸೆಲ್ ನಲ್ಲಿ 14 ದಿನಗಳ ಕ್ವಾರಂಟೈನ್ ಮುಗಿಸಿ ಶಿಕ್ಷೆಯಾಗಿರುವ ಸೆಲ್ ನಲ್ಲಿ ಹಾಕಲಾಗುತ್ತದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ
