ಉಡುಪಿ: ಮಲ್ಪೆಯ ಮೀನುಗಾರರ ಮೇಲೆ ಮಹಾರಾಷ್ಟ್ರದ ಕಡಲ್ಗಳ್ಳರಿಂದ ಹಲ್ಲೆ -Vishwanews24

Featured, ಉಡುಪಿ

ಉಡುಪಿ : ಉಡುಪಿಯಿಂದ ಕಸುಬಿಗೆ ತೆರಳಿದ ಮೀನುಗಾರರಿಗೆ ಮಹಾರಾಷ್ಟ್ರದ ಕಡಲ್ಗಳ್ಳರು ಮಾರಣಾಂತಿಕ ಹಲ್ಲೆ ಮಾಡಿ, ಮೀನು ದೋಚಿ ಅಟ್ಟಹಾಸ ಮೆರೆದಿದ್ದಾರೆ.

ಮಲ್ಪೆಯಿಂದ ತೆರಳಿ ಮಹಾರಾಷ್ಟ್ರದ ಮಾಲ್ವಾನ್ ಕಡಲ ತೀರದಲ್ಲಿ 7 ಮೀನುಗಾರರು ಸಾವನ್ನಪ್ಪಿದ ಘಟನೆ ಮಾಸುವ ಮುನ್ನವೇ ಉಡುಪಿಯ ಮಲ್ಪೆಯ ಮೀನುಗಾರರ ಮೇಲೆ ಮಹಾರಾಷ್ಟ್ರದ ಕಡಲ್ಗಳ್ಳರು ಹಲ್ಲೆ ಮಾಡಿದ್ದಾರೆ. ಬೋಟ್ ಮೂಲಕ 200 ಮೀನುಗಾರರು ಮಲ್ಪೆಯ ಆಳಸಮುದ್ರದ ಬೋಟನ್ನು ಸುತ್ತುವರಿದು 7 ಮೀನುಗಾರರಿಗೆ ಮನಬಂದಂತೆ ಥಳಿಸಿದ್ದಾರೆ.

ಕರಾವಳಿ ಮೀನುಗಾರರು ಮೀನುಗಾರಿಕೆಗೆ ಗೋವಾ, ಮಹಾರಾಷ್ಟ್ರದ ಕಡೆ ತೆರಳುತ್ತಾರೆ. ಹೀಗೆ, ಮಲ್ಪೆಯಿಂದ ಮೀನುಗಾರಿಕೆಗೆ ತೆರಳಿದ 4 ಆಳಸಮುದ್ರ ಬೋಟನ್ನು ಅಡ್ಡಗಟ್ಟಿದ ಕಡಲ್ಗಳ್ಳರು ಲೂಟಿ ಮಾಡಿದ್ದಾರೆ. ಸುಮಾರು 8 ಲಕ್ಷ ರೂಪಾಯಿಯ ಮೀನು, ಟಬ್, ಬಲೆಗಳು, ಜಿಪಿಎಸ್ ಮತ್ತಿತರ ಮಷೀನ್‍ಗಳನ್ನು ದೋಚಿದ್ದಾರೆ.

ರಾಜ್ಯದ ಮೀನುಗಾರರ ಮೇಲೆ ಕಳೆದ ಹಲವಾರು ತಿಂಗಳಿಂದ ಮಹಾರಾಷ್ಟ್ರ ಮೀನುಗಾರರು ದೌರ್ಜನ್ಯ ನಡೆಸುತ್ತಿದ್ದರೂ ಸರ್ಕಾರ ಈ ಬಗ್ಗೆ ಕ್ರಮ ಕೈಗೊಂಡಿಲ್ಲ.