ಉಡುಪಿ: ಮಹಿಳೆ ನಾಪತ್ತೆ – Vishwanews24
ಉಡುಪಿ: ಮಹಿಳೆ ನಾಪತ್ತೆ
ಉಡುಪಿ: ಉಡುಪಿ ತಾಲೂಕು ಪುತ್ತೂರು ಗ್ರಾಮದ ಸುಬ್ರಮಣ್ಯ ನಗರ ನಿವಾಸಿ ಮಹಾದೇವಿ (36) ಎಂಬ ಮಹಿಳೆಯು ಏಪ್ರಿಲ್ 12 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.
135 ಸೆಂ.ಮೀ ಎತ್ತರ, ಸಾಧಾರಣ ಶರೀರ, ದುಂಡು ಮುಖ ಹೊಂದಿದ್ದು, ಕನ್ನಡ ಹಾಗೂ ಹಿಂದಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣೆಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
