ಉಡುಪಿ: ಮುಖ್ಯಮಂತ್ರಿ ಕೋವಿಡ್ ಪರಿಹಾರ ನಿಧಿಗೆ 5 ಲಕ್ಷ ದೇಣಿಗೆ -Vishwanews24
ಉಡುಪಿ: ಮುಖ್ಯಮಂತ್ರಿ ಕೋವಿಡ್ ಪರಿಹಾರ ನಿಧಿಗೆ 5 ಲಕ್ಷ ದೇಣಿಗೆ -Vishwanews24
ಉಡುಪಿ: ವರುಣ್ ಪೈಪಿಂಗ್ ಸಿಸ್ಟಮ್ಸ್ ಮಣಿಪಾಲ ಇವರು ಮುಖ್ಯಮಂತ್ರಿ ಕೋವಿಡ್ ಪರಿಹಾರ ನಿಧಿಗೆ ದೇಣಿಗೆಯಾಗಿ ಲಕ್ಷ ರೂ.ಮೊತ್ತದ ಚೆಕ್ಕನ್ನು ಶಾಸಕ ಕೆ. ರಘುಪತಿ ಭಟ್ ಅವರ ಸಮ್ಮುಖದಲ್ಲಿ ಜಿಲ್ಲಾಧಿಕಾರಿ ಜಿ. ಜಗದೀಶ್ ಅವರಿಗೆ ಹಸ್ತಾಂತರಿಸಿದರು.
ಈ ಮಹತ್ತರ ಕೊಡುಗೆಗೆ ಶಾಸಕ ಕೆ. ರಘುಪತಿ ಭಟ್ ರವರು ಮೆಚ್ಚುಗೆಯನ್ನು ವ್ಯಕ್ತಪಡಿಸಿ ಅಭಿನಂದನೆಯನ್ನು ಸಲ್ಲಿಸಿದರು.
ಈ ಸಂದರ್ಭದಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಲಾಲಾಜಿ ಆರ್ ಮೆಂಡನ್, ವರುಣ್ ಪೈಪಿಂಗ್ ಸಿಸ್ಟಮ್ಸ್ ಮಣಿಪಾಲದ ಪಾಲುದಾರರಾದ ಎಂ. ವಿಶ್ವನಾಥ್ ಭಟ್, ವಲ್ಲಭ ಭಟ್ ಉಪಸ್ಥಿತರಿದ್ದರು.
