ಉಡುಪಿ: ಯುವನಿಧಿ  ಯೋಜನೆ : ಪ್ರತಿ ತಿಂಗಳು ಸ್ವಯಂ ಘೋಷಣೆ ಕಡ್ಡಾಯ – vishwanews24

Featured, ಉಡುಪಿ

ಉಡುಪಿ: ಯುವನಿಧಿ  ಯೋಜನೆ : ಪ್ರತಿ ತಿಂಗಳು ಸ್ವಯಂ ಘೋಷಣೆ ಕಡ್ಡಾಯ

ಉಡುಪಿ: ರಾಜ್ಯ ಸರಕಾರದ ಯುವನಿಧಿ ಯೋಜನೆಗೆ ನೋಂದಣ ಚಾಲ್ತಿಯಲ್ಲಿದ್ದು, ಅರ್ಹರು ಸೇವಾ ಸಿಂಧು ಪೋರ್ಟಲ್‌ನಲ್ಲಿ ಆನ್‌ಲೈನ್ ಮೂಲಕ ನೋಂದಣ ಮಾಡಿಕೊಳ್ಳಬಹುದಾಗಿದೆ.

೨೦೨೨-೨೩ ನೇ ಹಾಗೂ ಅನಂತರದ ಸಾಲಿನಲ್ಲಿ ಪದವಿ, ಸ್ನಾತಕೋತ್ತರ ಪದವಿ (ವೃತ್ತಿಪರ ಸೇರಿದಂತೆ) ಹಾಗೂ ಯಾವುದೇ ಡಿಪ್ಲೋಮಾ ಪಡೆದು ನಿರುದ್ಯೋಗಿಯಾಗಿರುವವರು ಯುವನಿಧಿ ಯೋಜನೆಯ ಮೂಲಕ ಪ್ರತಿ ತಿಂಗಳು ಪದವೀಧರ ನಿರುದ್ಯೋಗಿಗಳಿಗೆ ರೂ ೩,೦೦೦ ಹಾಗೂ ಡಿಪ್ಲೋಮಾ ಪಡೆದ ನಿರುದ್ಯೋಗಿಗಳಿಗೆ ರೂ.೧,೫೦೦ ನೇರ ನಗದು ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುವುದು.

ಉಡುಪಿ: ಭಾರಿ ವಾಹನಗಳ ಸಂಚಾರ ನಿಷೇಧ – vishwanews24

ಪ್ರತಿ ತಿಂಗಳು ಸ್ವಯಂ ಘೋಷಣೆ ಕಡ್ಡಾಯ : ಯುವನಿಧಿ ಯೋಜನೆಯ ಫಲಾನುಭವಿಗಳು ಪ್ರತಿ ತಿಂಗಳ ೨೫ ನೇ ತಾರೀಕಿನ ಒಳಗಾಗಿ ಆನ್‌ಲೈನ್‌ನಲ್ಲಿ ಲಾಗಿನ್ ಆಗಿ ಸ್ವಯಂ ಘೋಷಣೆ ನೀಡಬೇಕು. ಸ್ವಯಂ ಘೋಷಣೆ ನೀಡದಿದ್ದಲ್ಲಿ ಆ ತಿಂಗಳ ನೇರ ನಗದು ಖಾತೆಗೆ ಜಮೆಯಾಗುವುದಿಲ್ಲ.

ಆದ್ದರಿಂದ ಫಲಾನುಭವಿಗಳು ತಪ್ಪದೇ ಸೇವಾ ಸಿಂಧು ಪೋರ್ಟಲ್‌ನಲ್ಲಿ ಆನ್‌ಲೈನ್ ಮೂಲಕ ಪ್ರತಿ ತಿಂಗಳು ಸ್ವಯಂ ಘೋಷಣೆ ನೀಡಬೇಕು. ಹೆಚ್ಚಿನ ಮಾಹಿತಿಗಾಗಿ ಉದ್ಯೋಗಾಧಿಕಾರಿ, ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಕಛೇರಿ ಸಂಕೀರ್ಣ, ಬಿ. ಬ್ಲಾಕ್, ಮೊದಲನೆ ಮಹಡಿ, ರಜತಾದ್ರಿ, ಮಣ ಪಾಲ ಉಡುಪಿ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಪರಶುರಾಮನ ನಕಲಿ ಪ್ರತಿಮೆ ಸ್ಥಾಪಿಸಿ ಜನರ ದಿಕ್ಕನ್ನು ತಪ್ಪಿಸುತ್ತಿರುವ ಸುನೀಲ್ ಕುಮಾರ್ ಮಾಡಿದ ತಪ್ಪಿಗೆ ಶಿಕ್ಷೆಯಾಗಲೇಬೇಕು : ಲಕ್ಷ್ಮೀ ಹೆಬ್ಬಾಳಕರ್ ಆಗ್ರಹ – vishwanews24

Leave a Reply