ಉಡುಪಿ: ರೈತರ ಜಮೀನಿನ ಪಹಣಿಗಳಿಗೆ ಆಧಾರ್ ಸೀಡಿಂಗ್ ಕಡ್ಡಾಯ – vishwanews24

Featured, ಉಡುಪಿ

ಉಡುಪಿ: ರೈತರು ತಮ್ಮ ಜಮೀನಿನ ಪಹಣಿಗಳಿಗೆ ಆಧಾರ್ ಸೀಡಿಂಗ್ ಕಡ್ಡಾಯ

ಉಡುಪಿ: ರೈತರಿಗೆ ನಿಗಧಿತ ಸಮಯದಲ್ಲಿ ಸರಕಾರದ ಸೌಲಭ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಅಧಾರ್ ಕಾಯ್ದೆಯ ಕಲಂ 4(4) (ಬಿ) (2) ರ ಅಡಿ ಪಹಣಿಗಳಿಗೆ ಆಧಾರ್ ಸೀಡಿಂಗ್ ಮಾಡಲು ಸರಕಾರದಿಂದ ಅನುಮತಿ ನೀಡಲಾಗಿದ್ದು, ರೈತರು ತಮ್ಮ ಜಮೀನಿನ ಪಹಣಿ ಹಾಗೂ ಆಧಾರ್ ದಾಖಲಾತಿಗಳೊಂದಿಗೆ ಸ್ವಯಂ ಪ್ರೇರಣೆಯಿಂದ ಇಲಾಖೆಯ ವೆಬ್‌ಸೈಟ್ https://landrecords.karnataka.gov.in/Service4  ನಲ್ಲಿ ಲಾಗಿನ್ ಮಾಡಿಕೊಂಡು ಆಧಾರ್‌ನೊಂದಿಗೆ ಲಿಂಕ್ ಮಾಡಿಕೊಳ್ಳಬಹುದಾಗಿದೆ ಅಥವಾ ಪಹಣಿ ಹಾಗೂ ಆಧಾರ್ ದಾಖಲಾತಿಗಳೊಂದಿಗೆ ಸಂಬ0ಧಪಟ್ಟ ಗ್ರಾಮ ಆಡಳಿತಾಧಿಕಾರಿಯವರನ್ನು ಸಂಪರ್ಕಿಸಿ ಆಧಾರ್ ಜೋಡಣೆ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿರುತ್ತದೆ.

ಮಂಗಳೂರು: ಕಟ್ಟಡ ನಿರ್ಮಾಣ ವೇಳೆ ಮಣ್ಣು ಕುಸಿತ ಪ್ರಕರಣ – ಓರ್ವ ಕಾರ್ಮಿಕನ ರಕ್ಷಣೆ, ಮತ್ತೋರ್ವನಿಗಾಗಿ ಶೋಧ – vishwanews24 

ಪಹಣಿಯೊಂದಿಗೆ ಆಧಾರ್ ಜೋಡಣೆಗೆ ಜುಲೈ 31 ಕೊನೆಯ ದಿನವಾಗಿದ್ದು, ಸರಕಾರದ ಸೌಲಭ್ಯಗಳನ್ನು ಪಡೆದುಕೊಳ್ಳುವ ನಿಟ್ಟಿನಲ್ಲಿ ಹಾಗೂ ಸರಕಾರಿ ಸೌಲಭ್ಯದಿಂದ ವಂಚಿತರಾಗಬಾರದೆAಬ ಹಿನ್ನಲೆಯಲ್ಲಿ 2024 ರ ಜುಲೈ ಅಂತ್ಯದೊಳಗಾಗಿ ಕುಂದಾಪುರ ತಾಲೂಕಿನ ರೈತರು ಪಹಣಿಯೊಂದಿಗೆ ಆಧಾರ್ ಜೋಡಣೆ ಮಾಡಿಸಿಕೊಳ್ಳುವಂತೆ ಕುಂದಾಪುರ ತಹಶೀಲ್ದಾರರ ಕಚೇರಿ ಪ್ರಕಟಣೆ ತಿಳಿಸಿದೆ.

ಸೂರಜ್ ರೇವಣ್ಣ ಜಾಮೀನು ಅರ್ಜಿ ನಾಳೆಗೆ ಮುಂದೂಡಿಕೆ – vishwanews24

Leave a Reply