ಉಡುಪಿ : ಲಕ್ಷ್ಮೀ ಹೆಬ್ಬಾಳ್ಕರ್ ಗೋ ಬ್ಯಾಕ್ ಅಭಿಯಾನ: ಸಚಿವ ಜಿ ಪರಮೇಶ್ವರ್ ಪ್ರತಿಕ್ರಿಯೆ – vishwanews24
ಉಡುಪಿ : ಲಕ್ಷ್ಮೀ ಹೆಬ್ಬಾಳ್ಕರ್ ಗೋ ಬ್ಯಾಕ್ ಅಭಿಯಾನ: ಸಚಿವ ಜಿ ಪರಮೇಶ್ವರ್ ಅಚ್ಚರಿಯ ಹೇಳಿಕೆ
ಉಡುಪಿ: ಲೋಕಸಭೆ ಚುನಾವಣೆಯಲ್ಲಿ ಸೋಲಿನ ಬಳಿಕ ಉಡುಪಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಂದ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಗೋ ಬ್ಯಾಕ್ ಅಭಿಯಾನ ಆರಂಭವಾಗಿದೆ. ಈ ಬಗ್ಗೆ ಉಡುಪಿ ಪ್ರವಾಸದಲ್ಲಿರುವ ಗೃಹ ಸಚಿವಜಿ ಪರಮೇಶ್ವರ್ ಇದೀಗ ಪ್ರತಿಕ್ರಿಯಿಸಿದ್ದಾರೆ. ಕರಾವಳಿಯಲ್ಲಿ ಕಾಂಗ್ರೆಸ್ಸಿಗೆ ಹಿನ್ನಡೆ ಆಗಿದೆ. ಕರಾವಳಿಯಲ್ಲಿ ಪಕ್ಷ ಸಂಘಟನೆ ಕೆಲಸ ಆಗಬೇಕು. ಮುಂದಿನ ದಿನಗಳಲ್ಲಿ ಆತ್ಮಾವಲೋಕನ ಮಾಡುತ್ತೇವೆ. ಕರಾವಳಿಯ ಮೂರೂ ಜಿಲ್ಲೆಯಲ್ಲಿ ಹೆಚ್ಚಿನ ತಯಾರಿ ಮಾಡಬೇಕು ಎಂದರು.
ಉಡುಪಿ: ಜೂ.15ರೊಳಗೆ ಬಸ್‌ಗಳಲ್ಲಿನ ಕರ್ಕಶ ಹಾರ್ನ್ ಕಡ್ಡಾಯವಾಗಿ ತೆರವುಗೊಳಿಸಲು ಸೂಚನೆ – vishwanews24
ಲಕ್ಷ್ಮೀ ಹೆಬ್ಬಾಳ್ಕರ್ ಗೋ ಬ್ಯಾಕ್ ಅಭಿಯಾನ ವಿಚಾರವಾಗಿ ಪ್ರತಿಕ್ರಿಯಿಸಿ, ಜಿಲ್ಲಾ ಸಚಿವರ ನೇಮಕ ಮಾಡುವುದು ಆಡಳಿತದ ದೃಷ್ಟಿಯಿಂದಲೇ ವಿನಃ ರಾಜಕೀಯದ ದೃಷ್ಟಿಯಿಂದ ಅಲ್ಲ. ಪಕ್ಷ ಸಂಘಟನೆಗೆ ನಮ್ಮಲ್ಲಿ ಅಧ್ಯಕ್ಷರು ಇದ್ದಾರೆ. ಪ್ರತಿಯೊಂದು ಜಿಲ್ಲೆಗೂ ಪಕ್ಷ ಸಂಘಟನೆಗೆ ಉಸ್ತುವಾರಿಗಳು ಬೇರೆ ಇರುತ್ತಾರೆ. ಜಿಲ್ಲೆಯ ಆಡಳಿತ ಚುರುಕುಗೊಳಿಸುವುದು ಉಸ್ತುವಾರಿ ಸಚಿವರ ಕೆಲಸ. ಕಾರ್ಯಕ್ರಮ ಅನುಷ್ಠಾನ ಆಗುವಂತೆ ನೋಡಿಕೊಳ್ಳುವುದು ಅವರ ಕೆಲಸ. ಅವರಲ್ಲಿ ಏನಾದರೂ ತಪ್ಪಿದ್ದರೆ, ಕಾರ್ಯಕರ್ತರು ಹೇಳಿದರೆ ಮುಖ್ಯಮಂತ್ರಿಗಳು ಗಮನ ಹರಿಸುತ್ತಾರೆ ಎಂದರು.
ಉಡುಪಿ: ಶಾಲಾ ಬಸ್ ಚಾಲನೆ ವೇಳೆ ಹೃದಯಾಘಾತ : ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಚಾಲಕ ಸಾವು – vishwanews24
