ಉಡುಪಿ: ವಿಕಲಚೇತನರಿಗೆ ಟ್ರೈಸಿಕಲ್ ವಿತರಿಸಿದ ಉಡುಪಿ ಶಾಸಕ ರಘುಪತಿ ಭಟ್ -Vishwanews24
ಉಡುಪಿ: ಶೇಕಡಾ 75 ಕ್ಕೂ ಅಧಿಕ ಅಂಗವಿಕಲತೆ ಹೊಂದಿರುವ ಫಲಾನುಭವಿಗಳಿಗೆ ಇಂದು ಉಡುಪಿ ಶಾಸಕ ರಘುಪತಿ ಭಟ್ ಅವರು ಟ್ರೈಸಿಕಲ್ ವಿತರಿಸಿದರು.
ಕರ್ನಾಟಕ ರಾಜ್ಯ ವಿಕಲಚೇತನ ಹಾಗೂ ಹಿರಿಯ ನಾಗರಿಕ ಸಬಲೀಕರಣ ಇಲಾಖೆ ವತಿಯಿಂದ ಈ ಸೌಲಭ್ಯವನ್ನು ಅರ್ಹ ಫಲಾನುಭವಿಗಳಿಗಾಗಿ ನೀಡಲಾಗುತ್ತಿದೆ. ಸರ್ಕಾರದ ವತಿಯಿಂದ ಮಂಜೂರಾದ ಮೋಟೋರೈಸ್ಡ್ ಟ್ರೈಸಿಕಲ್ ನ್ನು 8 ವಿಕಲಚೇತನ ಫಲಾನುಭವಿಗಳಿಗೆ ಶಾಸಕರು ವಿತರಿಸಿ, ಶುಭ ಹಾರೈಸಿದರು.
ಜಿಲ್ಲಾ ಪಂಚಾಯತ್ ಕಚೇರಿ ಮುಂಭಾಗ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು, ಜಿಲ್ಲಾ ಪಂಚಾಯತ್ ಅಧ್ಯಕ್ಷ ದಿನಕರ್ ಬಾಬು ಮತ್ತು ಅಧಿಕಾರಿಗಳು ಉಪಸ್ಥಿತರಿದ್ದರು
