ಉಡುಪಿ ಶ್ರೀ ಕೃಷ್ಣಮಠ ಭಕ್ತಿ, ಜ್ಞಾನ ಮತ್ತು ಸೇವೆಯನ್ನು ಒಟ್ಟಿಗೆ ಕಾಣುವ ಸ್ಥಳ : ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ – vishwanews24
ಉಡುಪಿ: ಶ್ರೀ ಕೃಷ್ಣ ಜನ್ಮಾಷ್ಟಮಿ ಮಂಡಲೋತ್ಸವದ ಉದ್ಘಾಟಿಸಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್
ಉಡುಪಿ: ಶ್ರೀಕೃಷ್ಣನ ಉಪದೇಶಗಳು ಜೀವನದಲ್ಲಿ ಕರ್ಮ, ಧರ್ಮ, ಭಕ್ತಿ, ಜ್ಞಾನ ಮತ್ತು ಸೇವೆಯನ್ನು ಸಮತೋಲನಗೊಳಿಸಲು ಮಾರ್ಗದರ್ಶಕವಾಗಿವೆ ಎಂದು ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಹೇಳಿದರು.
ಉಡುಪಿ ಶ್ರೀ ಕೃಷ್ಣಮಠ ಪರ್ಯಾಯ ಶ್ರೀ ಪುತ್ತಿಗೆ ಮಠಗಳ ವತಿಯಿಂದ ಆಯೋಜಿಸಿದ್ದ ಶ್ರೀ ಕೃಷ್ಣ ಜನ್ಮಾಷ್ಟಮಿ ಮಂಡಲೋತ್ಸವದ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಶ್ರೀ ಕೃಷ್ಣನ ಉಪದೇಶಗಳನ್ನು ಆಳವಾಗಿ ಅರ್ಥಮಾಡಿಕೊಂಡರೆ, ಧರ್ಮ ಕಾಪಾಡುವುದುರ ಜೊತೆಗೆ ಜೀವನದಲ್ಲಿ ಯಶಸ್ಸುಗಳಿಸುವು ಮಾರ್ಗದತ್ತ ಸಾಗಬಹುದು ಎಂದು ಅಭಿಪ್ರಾಯಪಟ್ಟಿದ್ದಾರೆ. ಉಡುಪಿಯ ಆಧ್ಯಾತ್ಮಿಕ ಪರಂಪರೆಯ ಸಮಾನಾರ್ಥಕ ಶ್ರೀ ಪುತ್ತಿಗೆ ಶ್ರೀ ಕೃಷ್ಣ ಮಠದಿಂದ ಆಯೋಜಿಸಲಾದ ಶ್ರೀ ಕೃಷ್ಣ ಜನ್ಮಾಷ್ಟಮಿ ಮಂಡಲೋತ್ಸವದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಲು ಅವಕಾಶ ಸಿಕ್ಕಿದ್ದು ಅದೃಷ್ಟವಾಗಿದೆ.
ಶ್ರೀ ಪುತ್ತಿಗೆ ಶ್ರೀ ಕೃಷ್ಣ ಮಠವು ಅಷ್ಟಮಠಗಳಲ್ಲಿ ಒಂದು ವೈಭವಯುತ ಮಠವಾಗಿದೆ. ಈ ಮಠವು ದ್ವೈತ ವೇದಾಂತದ ಸಂಪ್ರದಾಯವನ್ನು ಉಳಿಸಿಕೊಂಡು ಬರುತ್ತಿದೆ ಮತ್ತು ಆಧುನಿಕ ಜಗತ್ತಿನಲ್ಲಿಯೂ ಅದನ್ನು ಸ್ಥಾಪಿಸುತ್ತಿದೆ. ಭಕ್ತಿ, ಜ್ಞಾನ ಮತ್ತು ಸೇವೆಯನ್ನು ಒಟ್ಟಿಗೆ ಕಾಣುವ ಸ್ಥಳ ಇದು.
ಈ ಮಠದ ಮುಖ್ಯಸ್ಥರು ಪೂಜ್ಯ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ, ಅವರು ಜಾಗತಿಕ ವೇದಿಕೆಯಲ್ಲಿ ಮಠದ ಸಂಪ್ರದಾಯಕ್ಕೆ ಪ್ರತಿಷ್ಠೆಯನ್ನು ನೀಡಿದ್ದಾರೆ. ಅವರು ಅಮೆರಿಕ, ಕೆನಡಾ ಮತ್ತು ಆಸ್ಟ್ರೇಲಿಯಾದಲ್ಲಿ ವೇದಾಂತ ಮತ್ತು ಸನಾತನ ಧರ್ಮವನ್ನು ಪ್ರಚಾರ ಮಾಡುವ ಮೂಲಕ ಜಗತ್ತನ್ನು ಭಾರತೀಯತೆಯೊಂದಿಗೆ ಸಂಪರ್ಕಿಸಿರುವುದು ಹೆಮ್ಮೆಯ ವಿಚಾರವಾಗಿದೆ ಎಂದು ಶ್ಲಾಘಿಸಿದರು.
ಸಾನ್ನಿಧ್ಯ ವಹಿಸಿದ್ದ ಪರ್ಯಾಯ ಪುತ್ತಿಗೆ ಮಠಾಧೀಶ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಆಶೀರ್ವಚನ ನೀಡಿ, ಶ್ರೀಕೃಷ್ಣ ಭಕ್ತವತ್ಸಲ, ಭಕ್ತರಾಧೀನ. ಭಕ್ತರಿಗಾಗಿ ದ್ವಾರಕೆಯಿಂದ ಉಡುಪಿಗೆ ಬಂದ ಕೃಷ್ಣನನ್ನು ಆಚಾರ್ಯ ಮಧ್ವರು ಪ್ರತಿಷ್ಠಾಪಿಸಿ, ಭಕ್ತರಿಗೆ ಕೃಷ್ಣ ದರ್ಶನದ ಅವಕಾಶ ಕಲ್ಪಿಸಿದರು. ಶ್ರೀಕೃಷ್ಣನ ತತ್ವಾದರ್ಶಗಳನ್ನು ಭಕ್ತರಿಗೆ ತಿಳಿಸುವ ಆಶಯದಿಂದ 48 ದಿನಗಳ ಪರ್ಯಂತ ಶ್ರೀಕೃಷ್ಣ ಜನ್ಮಾಷ್ಟಮಿಯನ್ನು ಆಚರಿಸಲಾಗುತ್ತಿದೆ. ಕಳೆದ ಬಾರಿ ಒಂದು ತಿಂಗಳ ಕಾಲ ಆಚರಿಸಲಾಗಿತ್ತು ಎಂದರು.
ಉಡುಪಿ : ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ನಲ್ಲಿ ಬೆಳ್ಳಿ ಪ್ರದರ್ಶನ ಮತ್ತು ಮಾರಾಟ – vishwanews24
ಸಾನ್ನಿಧ್ಯ ವಹಿಸಿದ್ದ ಕಿರಿಯ ಶ್ರೀ ಸುಶ್ರೀಂದ್ರತೀರ್ಥ ಶ್ರೀಪಾದರು ಆಶೀರ್ವಚನ ನೀಡಿದರು.ಶಾಸಕ ಯಶಪಾಲ್ ಸುವರ್ಣ, ಮಣಿಪಾಲ ಮಾಹೆ ಸಹಕುಲಾಧಿಪತಿ ಡಾ.ಎಚ್. ಎಸ್. ಬಲ್ಲಾಳ್, ಉದ್ಯಮಿಗಳಾದ ರಾಘವೇಂದ್ರ ರಾವ್ ಮತ್ತು ಬಾಳೆಕುದ್ರು ರಾಮಚಂದ್ರ ಉಪಾಧ್ಯಾಯ ಅಭ್ಯಾಗತರಾಗಿದ್ದರು. ಮಠದ ದಿವಾನ ನಾಗರಾಜ ಆಚಾರ್ಯ, ಕಾರ್ಯದರ್ಶಿ ಪ್ರಸನ್ನಾಚಾರ್ಯ ಮೊದಲಾದವರಿದ್ದರುಡಾ. ಗೋಪಾಲಾಚಾರ್ಯ ಮತ್ತು ರಮಣ ಆಚಾರ್ಯ ನಿರೂಪಿಸಿದರು. ರಾಘವೇಂದ್ರ ಆಚಾರ್ಯ ಅವರಿಂದ ಮಂತ್ರಘೋಷ ನಡೆಸಿದರು.
ಪೂಜ್ಯ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು, ಪೂಜ್ಯ ವಿಶ್ವಪ್ರಿಯ ತೀರ್ಥ ಸ್ವಾಮಿಜಿ, ಪುತ್ತಿಗೆ ಕಿರಿಯ ಶ್ರೀ ಸುಶ್ರೀಂದ್ರ ತೀರ್ಥರು, ಶಾಸಕ ಯಶಪಾಲ್ ಸುವರ್ಣ ಸೇರಿದಂತೆ ಮುಂತಾದ ಗಣ್ಯರು ಉಪಸ್ಥಿತರಿದ್ದರು.
