ಉಡುಪಿ : ಸಂತೆಕಟ್ಟೆ ಅಂಡರ್ ಪಾಸ್ ನಿರ್ಮಾಣಕ್ಕಾಗಿ ತೋಡಿರುವ ಹೊಂಡದಿಂದ ಮಳೆಗಾಲದಲ್ಲಿ ಅನಾಹುತ ಸಂಭವಿಸಿದ್ದಲ್ಲಿ ಶೋಭಾ ಕರಂದ್ಲಾಜೆ ನೇರ ಹೊಣೆ : ರಮೇಶ್ ಕಾಂಚನ್ – Vishwanews24

Featured, ಉಡುಪಿ

ಉಡುಪಿ : ಸಂತೆಕಟ್ಟೆ ಅಂಡರ್ ಪಾಸ್ ನಿರ್ಮಾಣಕ್ಕಾಗಿ ತೋಡಿರುವ ಹೊಂಡದಿಂದ ಮಳೆಗಾಲದಲ್ಲಿ ಅನಾಹುತ ಸಂಭವಿಸಿದ್ದಲ್ಲಿ ಶೋಭಾ ಕರಂದ್ಲಾಜೆ ನೇರ ಹೊಣೆ : ರಮೇಶ್ ಕಾಂಚನ್

ಉಡುಪಿ: ರಾಷ್ಟ್ರೀಯ ಹೆದ್ದಾರಿ 66 ರ ಕಲ್ಯಾಣಪುರ ಸಂತೆಕಟ್ಟೆಯಲ್ಲಿ ಅಂಡರ್ ಪಾಸ್ ನಿರ್ಮಾಣಕ್ಕಾಗಿ ತೋಡಿರುವ ಹೊಂಡದಿಂದ ಮಳೆಗಾಲದಲ್ಲಿ ಹೆದ್ದಾರಿ ಕುಸಿದು ಏನಾದರೂ ಅಪಾಯ ಸಂಭವಿಸಿದ್ದಲ್ಲಿ ಅದರ ನೈತಿಕ ಹೊಣೆಯನ್ನು ಹೊರಲು ಕೇಂದ್ರ ಸಚಿವೆ ಹಾಗೂ ಉಡುಪಿ – ಚಿಕ್ಕಮಗಳೂರು ಸಂಸದರಾದ ಕುಮಾರಿ ಶೋಭಾ ಕರಂದ್ಲಾಜೆಯವರು ಸಿದ್ದರಿದ್ದಾರೆಯೇ ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್ ಪ್ರಶ್ನಿಸಿದ್ದಾರೆ.

ಅವೈಜ್ಞಾನಿಕವಾಗಿ ಯಾವುದೇ ರೀತಿಯ ಮುಂಜಾಗ್ರತಾ ಕ್ರಮ ಕೈಗೊಳ್ಳದೆ ಆಳವಾದ ಗುಂಡಿಯನ್ನು ತೋಡಿದ್ದು ಸೂಕ್ತವಾದ ಮುನ್ನೆಚ್ಚರಿಕಾ ಕ್ರಮವನ್ನು ಕೂಡ ಕೈಗೊಂಡಿಲ್ಲ. ಒಂದು ವೇಳೆ ಗುಂಡಿಯ ಪಕ್ಕದಲ್ಲೇ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ 66 ಮಳೆಗೆ ಕುಸಿದು ಹೋದಲ್ಲಿ ಜೀವ ಹಾನಿಯ ಜೊತೆಗೆ ಸಂಪರ್ಕ ಕೂಡ ಕಡಿದುಕೊಳ್ಳುವ ಭೀತಿ ಇದೆ. ರಸ್ತೆ ನಿರ್ಮಾಣದ ಸಮಯದಲ್ಲೇ ಸೂಕ್ತ ಅಂಡರ್ ಪಾಸ್ ನಿರ್ಮಿಸದೆ ಈಗ ಇದನ್ನು ನಿರ್ಮಿಸಲಿಕ್ಕಾಗಿ ಆಳವಾದ ಗುಂಡಿ ಮಾಡಿರುವುದು ಅಧಿಕಾರಿಗಳು ಮತ್ತು ಕೇಂದ್ರ ಸರ್ಕಾರದ ನಿರ್ಲಕ್ಷ್ಯತಕ್ಕೆ ತೋರಿದ ಕೈಗನ್ನಡಿಯಾಗಿದೆ.

ಮಂಗಳೂರು: ದ.ಕ. ನೂತನ ಜಿಲ್ಲಾಧಿಕಾರಿ ಮುಲೈ ಮುಹಿಲನ್ ಅಧಿಕಾರ ಸ್ವೀಕಾರ – Vishwanews24

ಈ ನಡುವೆ ಸಂಸದರು ಇತ್ತೀಚಿನ ಸಭೆಯಲ್ಲಿ ಗುಂಡಿಯನ್ನು ತಾತ್ಕಾಲಿಕವಾಗಿ ಮಣ್ಣು ಹಾಕಿ ಮುಚ್ಚಲು ಸೂಚಿಸಿರುವುದು ಹಾಸ್ಯಾಸ್ಪದ ಸಂಗತಿಯಾಗಿದೆ. ಈಗಾಗಲೇ ಅಲ್ಲಿನ ಲೋಡುಗಟ್ಟಲೇ ಮಣ್ಣತನ್ನು ಲಕ್ಷಾಂತರ ರೂಪಾಯಿಗಳಿಗೆ ಇವರದೇ ಪಕ್ಷದ ನಾಯಕರು ಮಾರಿರುವುದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವುದು ಜನಸಾಮಾನ್ಯರು ನೋಡಿದ್ದಾರೆ. ಅಲ್ಲದೆ ಈಗಾಗಲೇ ಅಷ್ಟೋಂದು ಆಳವಾಗಿ ತೋಡಿರುವ ಗುಂಡಿಯನ್ನು ಮುಚ್ಚಲು ಸಾಧ್ಯವೇ ಎನ್ನುವ ಕನಿಷ್ಠ ಜ್ಞಾನ ಸಂಸದರಿಗೆ ಇಲ್ಲವೇ? ಮೂರು ನಾಲ್ಕು ತಿಂಗಳಿಗೊಮ್ಮೆ ಅತಿಥಿ ಕಲಾವಿದರಾಗಿ ಜಿಲ್ಲೆಗೆ ಆಗಮಿಸುವ ಸಂಸದರು ಜಿಲ್ಲೆಯ ಸಮಸ್ಯೆಯ ಬಗ್ಗೆ ಅರಿತುಕೊಳ್ಳುವ ಪ್ರಯತ್ನ ಕೂಡ ಮಾಡದಿರುವುದು ಜಿಲ್ಲೆಯ ಜನರ ದುರಂತವಾಗಿದೆ.

ಸಮಯಕ್ಕೆ ಸರಿಯಾಗಿ ಕೆಲಸ ಮಾಡಲು ವಿಫಲವಾದ ಹೆದ್ದಾರಿ ಇಲಾಖೆ ತಮ್ಮದೇ ಕೇಂದ್ರ ಸರಕಾರದ ಅಧೀನದಲ್ಲಿದ್ದು ಕರ್ತವ್ಯಲೋಪ ಎಸಗಿದ ಅಧಿಕಾರಿಗಳ ವಿರುದ್ದ ಕ್ರಮ ಕೈಗೊಳ್ಳಲು ಕೂಡ ಸಂಸದರಿಗೆ ಸಾಧ್ಯವಾಗದಿರುವುದು ಇವರ ದುರ್ಬಲತೆಯನ್ನು ತೋರಿಸುತ್ತದೆ. ಈ ಬಾರಿಯ ಮಳೆಗಾಲದಲ್ಲಿ ಸಂತೆಕಟ್ಟೆ ಪರಿಸರದ ಜನರು ಸೇರಿದಂತೆ ಜಿಲ್ಲೆಯ ಜನರು ಅಂಡರ್ ಪಾಸ್ ಗುಂಡಿಯಿಂದ ಸಮಸ್ಯೆಗೆ ಒಳಗಾಗುವುದು ಖಂಡಿತವಾಗಿದ್ದು ಈ ಬಗ್ಗೆ ಸಂಸದೆಯವರು ಸೂಕ್ತ ಕ್ರಮಕೈಗೊಳ್ಳದೆ ಹೋದಲ್ಲಿ ಮುಂದಿನ ದಿನಗಳಲ್ಲಿ ಪಕ್ಷದ ವತಿಯಿಂದ ಸಾರ್ವಜನಿಕರೊಂದಿಗೆ ಸೇರಿ ಹೋರಾಟ ಮಾಡಬೇಕಾದೀತು ಎಂದು ಕಾಂಚನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕೋಮು ದ್ವೇಷಕ್ಕೆ ಬಲಿಯಾದ ನಾಲ್ಕು ಕುಟುಂಬಗಳಿಗೆ ತಲಾ 25 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ – Vishwanews24

Leave a Reply