ಉಡುಪಿ : ಸರಳ ವಿವಾಹಕ್ಕೆ ಪ್ರೋತ್ಸಾಹಧನ ; ಅರ್ಜಿ ಆಹ್ವಾನ – vishwanews24

Featured, ಉಡುಪಿ

ಉಡುಪಿ : ಸರಳ ವಿವಾಹಕ್ಕೆ ಪ್ರೋತ್ಸಾಹಧನ: ಅರ್ಜಿ ಆಹ್ವಾನ

ಉಡುಪಿ, : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಪ್ರಸಕ್ತ ಸಾಲಿನ ಆರ್ಥಿಕವಾಗಿ ಹಿಂದುಳಿದಿರುವ ಅಲ್ಪಸಂಖ್ಯಾತ ಸಮುದಾಯದವರ ಸರಳ ವಿವಾಹಕ್ಕೆ ಪ್ರೋತ್ಸಾಹ ನೀಡಲು ಸ್ವಯಂ ಸೇವಾ ಸಂಸ್ಥೆಗಳ ಮೂಲಕ ನಡೆಯುವ ಸಮೂಹ ವೆಚ್ಚಗಳಿಗಾಗಿ ಪ್ರತಿ ಜೋಡಿಗೆ 50 ಸಾವಿರ ರೂಗಳ ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದ್ದು ಎಲ್ಲಾ ಅಗತ್ಯ ದಾಖಲೆಗಳೊಂದಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಕಚೇರಿಗೆ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ 8277799990 ಅಥವಾ ಆಯಾ ತಾಲೂಕು  ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ ಉಡುಪಿ: 0820-2574596, ಕುಂದಾಪುರ: 08254-23070, ಕಾರ್ಕಳ: 08258-231101 ಅನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

ಅ. 18ರಂದು ರಕ್ಷಣಾಪುರ ಜವನೆರ್ ಕಾಪು ವತಿಯಿಂದ ನಾಲ್ಕನೇ ವರ್ಷದ ‘ಕಾಪು ಪಿಲಿ ಪರ್ಬ’  – vishwanews24

Leave a Reply