ಉಡುಪಿ : ಸುಸಜ್ಜಿತ ಇಎಸ್ಐ ಆಸ್ಪತ್ರೆ ಕಾಮಗಾರಿ ಶೀಘ್ರ ಆರಂಭ: ಕೋಟ – vishwanews24
ಉಡುಪಿ : ಶೀಘ್ರ ಇಎಸ್ಐ ಆಸ್ಪತ್ರೆ ಕಾಮಗಾರಿ ಆರಂಭ: ಕೋಟ
ಮಣಿಪಾಲ: ಕೇಂದ್ರ ಸರಕಾರ ಈಗಾಗಲೇ ಮಂಜೂರು ಮಾಡಿರುವ ಇಎಸ್ಐ ಆಸ್ಪತ್ರೆಯ ನಿರ್ಮಾಣಕ್ಕೆ ಪೂರಕ ಪ್ರಕ್ರಿಯೆಯನ್ನು ಆದಷ್ಟು ಬೇಗ ಪೂರ್ಣಗೊಳಿಸಿ, ಕಾಮಗಾರಿ ಆರಂಭಿಸುವಂತೆ ಅಧಿಕಾರಿಗಳಿಗೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ನಿರ್ದೇಶನ ನೀಡಿದರು.
ಆಸ್ಪತ್ರೆ ನಿರ್ಮಾಣಕ್ಕೆ ವಾರಂಬಳ್ಳಿಯಲ್ಲಿ ಮೀಸಲಿಟ್ಟಿರುವ ಸುಮಾರು 6 ಎಕ್ರೆ ಜಾಗಕ್ಕೆ ಬುಧವಾರ ಖುದ್ದು ಭೇಟಿ ನೀಡಿ ಪರಿಶೀಲನೆ ನಡೆಸಿ, ಅನಂತರ ಜಿಲ್ಲಾಧಿಕಾರಿ ಕಚೇರಿಯ ಅಧಿಕಾರಿಗಳ ಸಭೆ ನಡೆಸಿದರು.
ಸುರತ್ಕಲ್: ದ್ವಿಚಕ್ರ ವಾಹನಕ್ಕೆ ಲಾರಿ ಡಿಕ್ಕಿ ; ಸವಾರ ಸ್ಥಳದಲ್ಲೇ ಮೃತ್ಯು – vishwanews24
150 ಕೋ.ರೂ. ವೆಚ್ಚದಲ್ಲಿ ನಿರ್ಮಾಣ ವಾಗಲಿರುವ ಇಎಸ್ಐ ಆಸ್ಪತ್ರೆಯ ಸಂಬಂಧ ಟೆಂಡರ್ ಪ್ರಕ್ರಿಯೆ ಆರಂಭವಾಗಿದೆ. ಸುಸಜ್ಜಿತ ಆಸ್ಪತ್ರೆ ಶೀಘ್ರದಲ್ಲೇ ನಿರ್ಮಾಣವಾಗಲಿದೆ. 32 ವಸತಿ ಗೃಹಗಳನ್ನು ಒಳಗೊಂಡು 100 ಬೆಡ್ನ ಆಸ್ಪತ್ರೆ ಇದಾಗಿದೆ ಎಂದರು.
ಹಿಂದೆ ಸಂಸದರಾಗಿದ್ದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಯವರ ಶಿಫಾರಸಿನಂತೆ ಆಸ್ಪತ್ರೆ ಮಂಜೂರಾಗಿದ್ದು, ಅದರಂತೆ ಈಗ ಟೆಂಡರ್ ಪ್ರಕ್ರಿಯೆ ಆರಂಭವಾಗಿದೆ. 100 ಬೆಡ್ನ ಆಸ್ಪತ್ರೆ ನಿರ್ಮಾಣವಾಗುತ್ತಿದ್ದಂತೆ ಕಾರ್ಮಿಕ ವರ್ಗಕ್ಕೆ ಇದರಿಂದ ಅನುಕೂಲವಾಗಲಿದೆ. ಉಡುಪಿ, ಕುಂದಾಪುರ, ಮಣಿಪಾಲ, ಕಾರ್ಕಳ ಹಾಗೂ ಪಡುಬಿದ್ರಿಯಲ್ಲಿರುವ ಇಎಸ್ಐ ಔಷಧಾಲಯಗಳಿಗೆ ವೈದ್ಯರನ್ನು ಕೂಡಲೇ ಒದಗಿಸುವಂತೆ ಸೂಚಿಸಲಾಯಿತು.
ಹರಿಯಾಣ ವಿಧಾನಸಭೆ ಚುನಾವಣೆ : ಬಿಜೆಪಿಯ 67 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ – vishwanews24
