ಉಡುಪಿ: ಸ್ಕೂಟರ್‌ನಲ್ಲಿ ಚಲಿಸುತ್ತಿದ್ದ ವೇಳೆ ವಿದ್ಯುತ್‌ ತಂತಿ ಬಿದ್ದು ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆಗೆ ಸ್ಪಂದಿಸದೆ ಮೃತ್ಯು – vishwanews24

Featured, ಉಡುಪಿ

ಉಡುಪಿ: ಸ್ಕೂಟರ್‌ನಲ್ಲಿ ಚಲಿಸುತ್ತಿದ್ದ ವೇಳೆ ವಿದ್ಯುತ್‌ ತಂತಿ ಬಿದ್ದು ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆಗೆ ಸ್ಪಂದಿಸದೆ ಮೃತ್ಯು

ಉಡುಪಿ: ಕುಂಜಾರುಗಿರಿ ನಿವಾಸಿ, ಮಣಿಪಾಲ ಪ್ರಸ್‌ನ ಯುನಿಟ್ ೫ರಲ್ಲಿ ಉದ್ಯೋಗದಲ್ಲಿದ್ದ ಕುಂಜಾರುಗಿರಿ ಶಶಿಧರ್ ಶೆಟ್ಟಿ (42) ಅವರು ಸೆ. 27ರಂದು ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಶಶಿಧರ್ ಶೆಟ್ಟಿ ಅವರು ತಾಯಿ, ಪತ್ನಿ, ಪುತ್ರನನ್ನು ಅಗಲಿದ್ದಾರೆ. 17 ವರ್ಷಗಳಿಂದ ಮಣಿಪಾಲ ಪ್ರಸ್‌ನಲ್ಲಿ ಉದ್ಯೋಗಿಯಾಗಿ ಸೇವೆ ಸಲ್ಲಿಸುತ್ತಿದ್ದರು.

ಶಶಿಧರ್ ಅವರು ಜುಲೈನಲ್ಲಿ ಮಣಿಪಾಲದ ಕೈಗಾರಿಕಾ ಪ್ರದೇಶದಲ್ಲಿ ಸ್ಕೂಟರ್‌ನಲ್ಲಿ ಚಲಿಸುತ್ತಿದ್ದ ವೇಳೆ ಗಾಳಿ-ಮಳೆಗೆ ವಿದ್ಯುತ್ ತಂತಿ ತುಂಡಾಗಿ ಬಿದ್ದು ಗಂಭೀರವಾಗಿ ಗಾಯಗೊಂಡು, ಕಳೆದ 2 ತಿಂಗಳಿನಿಂದ ಮಣಿಪಾಲ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇದೀಗ ಚಿಕಿತ್ಸೆಗೆ ಸ್ಪಂದಿಸದೆ ಸಾವನ್ನಪ್ಪಿದ್ದಾರೆ.

ಪಡುಬಿದ್ರಿ:  ವಿದ್ಯಾರ್ಥಿವೇತನ ಪಡೆದುಕೊಂಡವರು ಮುಂದೆ ಸಮಾಜಕ್ಕೆ ಕೊಡುಗೆ ನೀಡುವುದನ್ನು ಮರೆಯಬಾರದು : ಶಾಸಕ ಗುರ್ಮೆ ಸುರೇಶ್ ಶೆಟ್ಟಿ – vishwanews24

Leave a Reply