ಉಡುಪಿ : ಹೆಚ್ಚಿನ ಸಂಖ್ಯೆಯಲ್ಲಿ ಯುವ ಮತದಾರರನ್ನು ನೊಂದಣಿ ಮಾಡಿ : ಶಂಭುಭಟ್ -Vishwanews24
ಉಡುಪಿ : ಹೆಚ್ಚಿನ ಸಂಖ್ಯೆಯಲ್ಲಿ ಯುವ ಮತದಾರರನ್ನು ನೊಂದಣಿ ಮಾಡಿ : ಶಂಭುಭಟ್ -Vishwanews24
ಉಡುಪಿ : ಜಿಲ್ಲೆಯಲ್ಲಿ 18 ತುಂಬಿದ ಎಲ್ಲಾ ಯುವಕ ಯುವತಿಯರನ್ನು ಮತದಾರರ ಪಟ್ಟಿಗೆ ಸೇರ್ಪಡೆ ಮಾಡುವ ಮೂಲಕ, ಹೆಚ್ಚಿನ ಸಂಖ್ಯೆಯಲ್ಲಿ ಯುವ ಮತದಾರರ ನೊಂದಾವಣೆಗೆ ಅಗತ್ಯ ಕ್ರಮ ಕೈಗೊಳ್ಳುವಂತೆ, ರಾಜ್ಯ ಚುನಾವಣಾ ಆಯೋಗದ ಜಂಟಿ ಮುಖ್ಯ ಚುನಾವಣಾಧಿಕಾರಿ ಶಂಭುಭಟ್ ಹೇಳಿದರು.
ಅವರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ, ಜಿಲ್ಲೆಯ ಮತದಾರರ ಪಟ್ಟಿಯ ಪರಿಷ್ಕರಣೆ ಕುರಿತು ನಡೆದ, ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಮತದಾರರ ಪಟ್ಟಿ ಪರಿಷ್ಕರಣೆ ಸಂರ್ಭದಲ್ಲಿ ಯಾವುದೇ ಲೋಪದೋಷಗಳಾಗದಂತೆ ಎಚ್ಚರಿಕೆ ವಹಿಸಬೇಕು. ಇ-ಎಪಿಕ್ ಕರ್ಡ್ ಕುರಿತಂತೆ ಸರ್ವಜನಿಕರಿಗೆ ಅಗತ್ಯ ಮಾಹಿತಿ ನೀಡಿ, ಕಾರ್ಡ್ಗಳನ್ನು ಪಡೆಯುವಂತೆ ತಿಳಿಸಿ ಎಂದರು.
ಸಭೆಯಲ್ಲಿ ಉಪ ಮುಖ್ಯ ಚುನಾವಣಾಧಿಕಾರಿ ಲಕ್ಷ್ಮೀಶ್ವರ, ದಿನೇಶ್ ಚಂದ್ರ, ಜಿಲ್ಲಾಧಿಕಾರಿ ಜಿ.ಜಗದೀಶ್, ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಕುಂದಾಪುರ ಉಪ ವಿಭಾಗಾಧಿಕಾರಿ ರಾಜು, ಜಿಲ್ಲೆಯ ಎಲ್ಲಾ ತಹಶೀಲ್ದಾರ್ಗಳು ಉಪಸ್ಥಿತರಿದ್ದರು.
ಸಭೆಯ ನಂತರ ಮತದಾರರ ಪಟ್ಟಿಯ ಪರಿಶೀಲನೆ ಕುರಿತಂತೆ, ಉಡುಪಿಯ ಶಿವಳ್ಳಿ ಸೇರಿದಂತೆ ವಿವಿಧ ಭಾಗದ ಸರ್ವಜನಿಕರ ಮನೆಗಳಿಗೆ ಭೇಟಿ ನೀಡಿ, ಮತದಾರರ ಪಟ್ಟಿಯಲ್ಲಿ ಮತದಾರರು ವಾಸವಿರುವ ಬಗ್ಗೆ ಪರಿಶೀಲನೆ ನಡೆಸಿದರು. ಭೇಟಿ ಸಂರ್ಭದಲ್ಲಿ ಉಡುಪಿ ತಹಶೀಲ್ದಾರ್ ಪ್ರದೀಪ್ ಕರ್ಡೇಕರ್ ಉಪಸ್ಥಿತರಿದ್ದರು.
