ಉಡುಪಿ : Zee Kannada ರಿಯಾಲಿಟಿ ಶೋ ನಲ್ಲಿ ಯಕ್ಷಗಾನಕ್ಕೆ ಅವಮಾನ: ಯಕ್ಷಾಭಿಮಾನಿಗಳಿಂದ ಸಚಿವ ಸುನೀಲ್ ಹಾಗೂ ಕೋಟಾ ಠಾಣೆಗೆ ದೂರು – Vishwanews24
Zee Kannada ರಿಯಾಲಿಟಿ ಶೋ ನಲ್ಲಿ ನಡೆದ ಡ್ಯಾನ್ಸ್ ಸ್ಪರ್ಧೆಯಲ್ಲಿ ಯಕ್ಷಗಾನಕ್ಕೆ ಅವಮಾನ..
ಅಶ್ಲೀಲ ನೃತ್ಯದಿಂದ ಕರಾವಳಿಗರ ಧಾರ್ಮಿಕ ಭಾವನೆಗೆ ಧಕ್ಕೆ..
ಯಕ್ಷಾಭಿಮಾನಿಗಳಿಗೆ ನೋವುಂಟು ಮಾಡಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು..
ವಾಹಿನಿಯ ಮುಖ್ಯಸ್ಥರು ಮತ್ತು ನೃತ್ಯ ಸಂಯೋಜಕರು ಅದೇ ಕಾರ್ಯಕ್ರಮದಲ್ಲಿ ಕ್ಷಮೆ ಯಾಚಿಸಬೇಕು ಎಂದು ಆಗ್ರಹ..
ಈ ಬಗ್ಗೆ ಪರಿಶೀಲಿಸುವುದಾಗಿ ಸಚಿವರ ಭರವಸೆ..
ಉಡುಪಿ: ಕನ್ನಡದ ಖಾಸಗಿ ವಾಹಿನಿಯ ರಿಯಾಲಿಟಿ ಷೋನಲ್ಲಿ ಕರಾವಳಿಯ ಗಂಡುಕಲೆ ಯಕ್ಷಗಾನಕ್ಕೆ ಅವಮಾನ ಮಾಡಿದ್ದಾರೆ. ಆದ್ದರಿಂದ ವಾಹಿನಿಯನ್ನು ಬಹಿಷ್ಕರಿಸುವ ಬಗ್ಗೆ ಯಕ್ಷಾಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಅಭಿಯಾನ ನಡೆಸುತ್ತಿದ್ದು, ಕನ್ನಡ ಮತ್ತು ಸಂಸ್ಕೃತಿ ಸಚಿವ ಸುನಿಲ್ ಕುಮಾರ್ಗೆ ದೂರು ನೀಡಿದ್ದಾರೆ.
ಕನ್ನಡ ಮನೋರಂಜನ ವಾಹಿನಿಯೊಂದರ ರಿಯಾಲಿಟಿ ಷೋನಲ್ಲಿ ನಡೆದ ಡ್ಯಾನ್ಸ್ ಸ್ಪರ್ಧೆಯಲ್ಲಿ ಯಕ್ಷಗಾನಕ್ಕೆ ಅವಮಾನ ಮಾಡಲಾಗಿದೆ.
ಅದರಲ್ಲಿ ಗಂಡುಕಲೆಯನ್ನು ಅಶ್ಲೀಲವಾಗಿ ಬಿಂಬಿಸಿದ್ದಾರೆ ಎಂಬ ಆರೋಪವನ್ನು ಸಾಮಾಜಿಕ ಜಾಲತಾಣದಲ್ಲಿ ಯಕ್ಷಾಭಿಮಾನಿಗಳು ನಡೆಸುತ್ತಿದ್ದಾರೆ. ಇದೇ ಖಾಸಗಿ ವಾಹಿನಿಯಿಂದ ಸತತ ಮೂರನೇ ಬಾರಿ ಯಕ್ಷಗಾನಕ್ಕೆ ಅವಮಾನ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ : ಮಂಗಳೂರು: ಏಕ ಬಳಕೆಯ ಪ್ಲಾಸ್ಟಿಕ್ ನಿಷೇಧ ಕಟ್ಟುನಿಟ್ಟಾಗಿ ಜಾರಿಗೆ : ಜಿಲ್ಲಾಧಿಕಾರಿ ಸೂಚನೆ – Vishwanews24
ಯಾವುದೇ ಖಾಸಗಿ ವಾಹಿನಿಯಲ್ಲೂ ಯಕ್ಷಗಾನಕ್ಕೆ ಅವಮಾನವಾಗಬಾರದು. ಈ ಬಗ್ಗೆ ಪರೀಕ್ಷಿಸಲು ಸಮಿತಿ ರಚನೆ ಮಾಡಬೇಕು ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಸುನಿಲ್ ಕುಮಾರ್ಗೆ ದೂರು ನೀಡಿದ್ದಾರೆ. ಈ ಬಗ್ಗೆ ಪರಿಶೀಲಿಸುವುದಾಗಿ ಸಚಿವರು ಭರವಸೆ ನೀಡಿದ್ದು, ಜೊತೆಗೆ ಉಡುಪಿ ಜಿಲ್ಲೆಯ ಕೋಟ ಪೊಲೀಸ್ ಠಾಣೆಗೆ ದೂರು ಕೂಡಾ ನೀಡಲಾಗಿದೆ.
ಕರಾವಳಿ ಭಾಗದಲ್ಲಿ ದೇವರ ಆರಾಧನೆಯ ಭಾಗವಾಗಿ ನಡೆಯುವ ಯಕ್ಷಗಾನಕ್ಕೆ ಹಾಗೂ ವೇಷಧಾರಿಗಳಿಗೆ ಸಿನಿಮಾ ನಟರಂತೆ ಅಭಿಮಾನಿಗಳಿದ್ದಾರೆ. ಕರಾವಳಿ ಭಾಗದಲ್ಲಿ ಹರಕೆ ಹೊತ್ತು ಯಕ್ಷಗಾನಗಳನ್ನು ನಡೆಸುತ್ತಾರೆ. ಹಲವು ದೇವಾಲಯಗಳು ಯಕ್ಷಗಾನ ಮೇಳ ನಡೆಸುತ್ತಿವೆ. ಇಂತಹ ಅಶ್ಲೀಲ ನೃತ್ಯದಿಂದ ಕರಾವಳಿಗರ ಧಾರ್ಮಿಕ ಭಾವನೆಗೆ ಧಕ್ಕೆ ಉಂಟಾಗಿದೆ. ಯಕ್ಷಾಭಿಮಾನಿಗಳಿಗೆ ನೋವುಂಟು ಮಾಡಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ವಾಹಿನಿಯ ಮುಖ್ಯಸ್ಥರು ಮತ್ತು ನೃತ್ಯ ಸಂಯೋಜಕರು ಅದೇ ಕಾರ್ಯಕ್ರಮದಲ್ಲಿ ಕ್ಷಮೆ ಯಾಚಿಸಬೇಕು ಎಂದು ಆಗ್ರಹಿಸುತ್ತಿದ್ದಾರೆ.
ಇದನ್ನೂ ಓದಿ : ಉಡುಪಿ : ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ – Vishwanews24

