ಉದಯಪುರ ಪ್ರಕರಣ : ಕರ್ನಾಟಕದಾದ್ಯಂತ ಹೈ ಅಲರ್ಟ್ ಘೋಷಣೆ  – Vishwanews24

Featured, ರಾಜ್ಯ ನ್ಯೂಸ್

ಉದಯಪುರ ಪ್ರಕರಣ : ಕರ್ನಾಟಕದಾದ್ಯಂತ ಹೈ ಅಲರ್ಟ್ ಘೋಷಣೆ 

ಬೆಂಗಳೂರು : ಬಿಜೆಪಿ ನಾಯಕಿ ನೂಪುರ್ ಶರ್ಮಾ ಬೆಂಬಲಿಸಿ ಪೋಸ್ಟ್ ಹಾಕಿದ್ದ ಹಿಂದೂ ಟೈಲರ್ ಕನ್ಹಯ್ಯ ಲಾಲ್ ಎಂಬುವರನ್ನು ರಾಜಸ್ಥಾನದ ಉದಯಪುರದಲ್ಲಿ ಹತ್ಯೆ ಮಾಡಲಾಗಿದ್ದು, ಹೀಗಾಗಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ.

ಉದಯಪುರದ ಟೈಲರ್ ಅಂಗಡಿ ಮಾಲೀಕ ಕನ್ಹಯ್ಯ ಲಾಲ್ ನನ್ನು ಇಬ್ಬರು ಮುಸ್ಲಿಂ ವ್ಯಕ್ತಿಗಳು ಕೊಲೆ ಮಾಡಿದ್ದಾರೆ. ಕೊಲೆ ವಿಡಿಯೋ ಮಾಡಿಕೊಂಡು ಅದನ್ನು ಸೋಶಿಯಲ್ ಮೀಡಿಯಾದಲ್ಲಿ ಹರಿಬಿಟ್ಟಿದ್ದಾರೆ. ವಿಡಿಯೋದಲ್ಲಿ ಪ್ರಧಾನಿ ನರೇಂದ್ರ ಮೋದಿಯನ್ನೂ ಹತ್ಯೆ ಮಾಡುವುದಾಗಿಯೂ ಬೆದರಿಕೆ ಹಾಕಿದ್ದಾರೆ. ಸದ್ಯ ದೇಶಾದ್ಯಂತ ಈ ಘಟನೆ ಭಾರೀ ಚರ್ಚೆಗೆ ಕಾರಣವಾಗಿದ್ದು, ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಹೈಲರ್ಟ್ ಇರುವಂತೆ ಕಮಿಷನರ್ ಪ್ರತಾಪ್ ರೆಡ್ಡಿ ಡಿಸಿಪಿಗಳಿಗೆ ಸೂಚನೆ ನೀಡಿದ್ದಾರೆ.

ಉದಯಪುರ ಪ್ರಕರಣ : ಎನ್‌ಐಎ ತನಿಖೆಗೆ ಕೇಂದ್ರ ಗೃಹ ಸಚಿವಾಲಯ ಆದೇಶ – Vishwanews24

Leave a Reply