ಉಮೇಶ್ ಕತ್ತಿ ಅಂತಿಮ ಯಾತ್ರೆ ; ರಾಜ್ಯದಲ್ಲಿ ಮೂರು ದಿನ ಶೋಕಾಚರಣೆ : ಸಿಎಂ – Vishwanews24
ಉಮೇಶ್ ಕತ್ತಿ ಅಂತಿಮ ಯಾತ್ರೆ; ರಾಜ್ಯದಲ್ಲಿ ಮೂರು ದಿನ ಶೋಕಾಚರಣೆ: ಸಿಎಂ
ಬೆಳಗಾವಿ: ಇವತ್ತು, ನಾಳೆ ಮತ್ತು ನಾಡಿದ್ದು ಮೂರು ದಿನ ಶೋಕಾಚರಣೆ ಮಾಡಲು ತಿರ್ಮಾನ ಮಾಡಲಾಗಿದ್ದು, ಈ ಮೂರು ದಿನ ಯಾವುದೆ ಸರ್ಕಾರಿ ಕಾರ್ಯಕ್ರಮ ನಡೆಯುವುದಿಲ್ಲ.ದೊಡ್ದ ಬಳ್ಳಾಪುರದಲ್ಲಿ ನಡೆಯುವ ಜನೋತ್ಸವ ಕಾರ್ಯಕ್ರಮವನ್ನು ಸೆ.11ಕ್ಕೆ ಮುಂದೂಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.
ಸಚಿವ ಉಮೇಶ್ ಕತ್ತಿ ಅವರ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಲು ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಸಿಎಂ ಬೊಮ್ಮಾಯಿ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಆತ್ಮೀಯ ಸ್ನೇಹಿತ, ಸಚಿವ ಸಂಪುಟದ ಹಿರಿಯ ಸಹೋದ್ಯೋಗಿ, ರಾಜ್ಯ ಕಂಡ ಧೀಮಂತ ನಾಯಕ ಉಮೇಶ ಕತ್ತಿ ಎಂದು ಭಾವುಕರಾಗಿ ಹೇಳಿದರು.
ನಾನು ಅತ್ಯಂತ ಭಾರವಾದ ಹೃದಯದಿಂದ ಬೆಳಗಾವಿಗೆ ಬಂದಿದ್ದೇನೆ. ಇವತ್ತು ಉಮೇಶ ಕತ್ತಿ ಅಂತ್ಯ ಕ್ರಿಯೆಯಲ್ಲಿ ಪಾಲ್ಗೊಳ್ಳುತ್ತಿದ್ದೇನೆ. ಅಂತ್ಯಕ್ರಿಯೆ ಎಲ್ಲ ವ್ಯವಸ್ಥೆ ಮಾಡಲಾಗಿದೆ.ಸಾರ್ವಜನಿಕ ಅಂತಿಮ ದರ್ಶನಕ್ಕೆ ಎಲ್ಲ ವ್ಯವಸ್ಥೆ ಮಾಡಲಾಗಿದೆ.ಅಂತ್ಯಕ್ರಿಯೆ ಅವರ ತೋಟದಲ್ಲಿ ನೆರವೇರಲಿದೆ.ಜನರು ದೊಡ್ಡ ಪ್ರಮಾಣದಲ್ಲಿ ಬಂದಿದ್ದಾರೆ ಸಹಕಾರ ಮಾಡಬೇಕು. ಸರ್ಕಾರದ ಗೌರವದೊಂದಿಗೆ ಅಂತ್ಯಕ್ರಿಯೆ ನಡೆಯಲು ಆಜ್ಞೆ ಹೊರಡಿಸಲಾಗಿದೆ ಎಂದರು.
ತವರು ಜಿಲ್ಲೆಗೆ ಬಂದ ಉಮೇಶ್ ಕತ್ತಿ ಪಾರ್ಥಿವ ಶರೀರ : ಮುಗಿಲು ಮುಟ್ಟಿದ ಆಕ್ರಂದನ – Vishwanews24
