ಉಳ್ಳಾಲ: ಬೈಕ್ ಅಪಘಾತ – ವಿವಾಹಿತೆ ಸಾವು – Vishwanews24

Featured, ದಕ್ಷಿಣ ಕನ್ನಡ

ಉಳ್ಳಾಲ: ಬೈಕ್ ಅಪಘಾತ – ವಿವಾಹಿತೆ ಸಾವು

ಉಳ್ಳಾಲ: ಬೈಕ್ ಅಪಘಾತ ಸಂಭವಿಸಿ ಸಹಸವಾರೆ ವಿವಾಹಿತ ಮಹಿಳೆ ದಾರುಣವಾಗಿ ಸಾವನ್ನಪ್ಪಿ, ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಉಳ್ಳಾಲದ ನಾಟೆಕಲ್ ಸಮೀಪ ಭಾನುವಾರ ಸಂಭವಿಸಿದೆ.

ಬೋಂದೇಲ್ ನಿವಾಸಿ ಶ್ರೀನಿಧಿ (29) ಮೃತ ದುರ್ದೈವಿ.

ಮತ್ತೆ ಬಿಜೆಪಿ ಸೇರ್ಪಡೆಯಾದ ಶಾಸಕ ಜನಾರ್ದನ ರೆಡ್ಡಿ – Vishwanews24

ಸವಾರ ಸಂಬಂಧಿ ಯತೀಶ್ ದೇವಾಡಿಗ ಗಂಭೀರವಾಗಿ ಗಾಯಗೊಂಡಿದ್ದು, ಉಳ್ಳಾಲದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮೃತರು ಹಾಗೂ ಗಾಯಾಳು, ಮುಡಿಪುವಿನಲ್ಲಿನ ಸಂಬಂಧಿಕರ ಗೃಹಪ್ರವೇಶಕ್ಕೆ ತೆರಳಿ ವಾಪಸ್ಸಾಗುವ ಸಂದರ್ಭ ಬೈಕ್, ಸವಾರನ ನಿಯಂತ್ರಣ ತಪ್ಪಿ ನಾಟೆಕಲ್ ಗ್ರೀನ್ ಗ್ರೌಂಡ್ ಸಮೀಪ ಡಿವೈಡರ್ ಗೆ ಬಡಿದು ಈ ದುರ್ಘಟನೆ ನಡೆದಿದೆ. ಇನ್ನು ಮೃತ ಶ್ರೀನಿಧಿ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದರೆ, ಯತೀಶ್ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಬಗ್ಗೆ ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮತ್ತೆ ಬಿಜೆಪಿ ಸೇರ್ಪಡೆಯಾದ ಶಾಸಕ ಜನಾರ್ದನ ರೆಡ್ಡಿ – Vishwanews24

Leave a Reply