ಎಚ್ ಡಿ ರೇವಣ್ಣ ಅವರಿಗೆ ಕೊರೊನಾ ಪಾಸಿಟಿವ್ -Vishwanews24

Featured, ರಾಜ್ಯ ನ್ಯೂಸ್

ಎಚ್ ಡಿ ರೇವಣ್ಣ ಅವರಿಗೆ ಕೊರೊನಾ ಪಾಸಿಟಿವ್ -Vishwanews24

ಬೆಂಗಳೂರು: ಮಾಜಿ ಸಚಿವ ಎಚ್ ಡಿ ರೇವಣ್ಣ ಅವರಿಗೆ ಕೊರೊನಾ ಪಾಸಿಟಿವ್ ಬಂದಿದೆ. ಸೋಂಕು ಬಂದ ಹಿನ್ನೆಲೆಯಲ್ಲಿ ಇಂದು ಮುಂಜಾನೆ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ರೇವಣ್ಣ ದಾಖಲಾಗಿದ್ದಾರೆ.

ಎರಡು ತಿಂಗಳ ಹಿಂದೆ ರೇವಣ್ಣನವರ ಬೆಂಗಾವಲು ಪಡೆಯ 9 ಜನ ಪೊಲೀಸರಿಗೆ ಕೊರೊನಾ ಪರೀಕ್ಷೆ ಮಾಡಲಾಗಿತ್ತು. ಅವರಲ್ಲಿ ನಾಲ್ವರಿಗೆ ಕೊರೊನಾ ಪಾಸಿಟಿವ್ ಬಂದಿತ್ತು. ಈ ಸಂದರ್ಭದಲ್ಲಿ ಅವರಿಗೆ ಪರೀಕ್ಷೆ ನಡೆಸಿದಾಗ ನೆಗೆಟಿವ್‌ ಬಂದಿತ್ತು.

ಆಗಸ್ಟ್‌ 25 ರಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ ಮತ್ತು ಅರಸೀಕೆರೆ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಶಾಸಕ ಎಂ. ಶಿವಲಿಂಗೇಗೌಡ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿತ್ತು. ಇಬ್ಬರು ಆಸ್ಪತ್ರೆಗೆ ದಾಖಲಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ