ಬೆಂಗಳೂರು : ಕೊನೆಗೂ ತುಳು ಭಾಷೆಯಲ್ಲಿ ಕಾಂತಾರ ಸಿನೆಮಾ ಬಿಡುಗಡೆಗೆ ಕೊನೆಗೂ ಮುಹೂರ್ತ ಕೂಡಿ ಬಂದಿದ್ದು, ಡಿಸೆಂಬರ್ 2 ರಂದು ತುಳು ಬಾಷೆಯಲ್ಲಿ ಕಾಂತಾರ ಸಿನೆಮಾ ಬಿಡುಗಡೆಯಾಗಲಿದೆ. ಕಾಂತಾರ ಇದೀಗ ಬಿಡುಗಡೆಯಾದ ಎಲ್ಲಾ ಭಾಷೆಗಳಲ್ಲಿ ಭರ್ಜರಿಯಾಗಿ ಪ್ರದರ್ಶನ ಕಾಣುತ್ತಿದ್ದು, ಇದೀಗ ಓಟಿಟಿಯಲ್ಲೂ ಕಾಂತಾರ ಸಿನೆಮಾ ಬಿಡುಗಡೆಯಾಗಿದ್ದು, ಇದೀಗ ತುಳುವಿನಲ್ಲಿ ಕಾಂತಾರದ ಟ್ರೈಲರ್ ಬಿಡುಗಡೆಯಾಗಿದೆ.
ಕಾಂತಾರ ಸಿನಿಮಾ ದೈವಗಳ ಕಥೆ ಹೊಂದಿತ್ತು. ಕರಾವಳಿ ಭಾಗದ ಹಿನ್ನೆಲೆಯಿಂದ ರೂಪುಗೊಂಡ ಈ ಸಿನಿಮಾ, ಬಿಡುಗಡೆಯಾದ ಆರಂಭದಿಂದಲೂ ತುಳು ಭಾಷೆಗೆ ಡಬ್ ಆಗಬೇಕು ಎಂಬ ಆಗ್ರಹ ಆರಂಭವಾಗಿತ್ತು. ಅಂತೆಯೇ ಸಿನಿಮಾ ತಂಡ ಕೂಡ ತುಳು ಭಾಷೆಗೆ ಡಬ್ಬಿಂಗ್ ಆಗುತ್ತಿರುವ ಮಾಹಿತಿ ಹಂಚಿಕೊಂಡಿತ್ತು.
ಡಿಸೆಂಬರ್ 2 ರಂದು ದೇಶದಾದ್ಯಂತ ಕಾಂತಾರ ಸಿನಿಮಾ ತುಳು ಭಾಷೆಯಲ್ಲಿ ಬಿಡುಗಡೆಯಾಗುವುದಾಗಿ ಹೊಂಬಾಳೆ ಫಿಲ್ಮ್ಸ್ ಹೇಳಿಕೊಂಡಿದೆ. ಅಂತೆಯೇ ನವೆಂಬರ್ 25 ರಿಂದ ಹೊರದೇಶಗಳಲ್ಲಿ ಕಾಂತಾರ ತುಳು ಅವತರಣಿಕೆ ಬಿಡುಗಡೆಯಾಗುತ್ತಿದೆ.
ತುಳು ರಂಗಭೂಮಿಯ ಹಿರಿಯ, ಜನಪ್ರಿಯ ಕಲಾವಿದ ಡಾ.ದೇವದಾಸ್ ಕಾಪಿಕಾಡ್, ಅಚ್ಯುತ್ ಕುಮಾರ್ ಅವರ ಪಾತ್ರಕ್ಕೆ ಧ್ವನಿ ನೀಡಿದ್ದಾರೆ. ತುಳು ಸಿನಿಮಾ ನಟ ಅರ್ಜುನ್ ಕಾಪಿಕಾಡ್ ರಿಷಬ್ ಶೆಟ್ಟಿ ಪಾತ್ರಕ್ಕೆ ಧ್ವನಿಯಾಗಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…