Featured

ಎಲ್ಲ ಶಾಲಾ ಕಾಲೇಜುಗಳಲ್ಲಿ ಸುಭಾಷಚಂದ್ರ ಭೋಸ್‌ರ 125 ನೇ ಜಯಂತಿ ಆಚರಣೆ : ಸಿಎಂ ಬೊಮ್ಮಾಯಿ – Vishwanews24

ಎಲ್ಲ ಶಾಲಾ ಕಾಲೇಜುಗಳಲ್ಲಿ ಸುಭಾಷಚಂದ್ರ ಭೋಸ್‌ರ 125 ನೇ ಜಯಂತಿ ಆಚರಣೆ : ಸಿಎಂ ಬೊಮ್ಮಾಯಿ – Vishwanews24

ಬೆಂಗಳೂರು: ಅಪ್ರತಿಮ ದೇಶ ಭಕ್ತ, ಭಾರತದ ಸ್ವಾತಂತ್ರ್ಯಕ್ಕಾಗಿ ಪ್ರಾಣವನ್ನೇ ತ್ಯಾಗ ಮಾಡಿದ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜೀವನ ಸಾಧನೆ ಸ್ಮರಣೀಯ ಹಾಗೂ ಯುವ ಜನರಿಗೆ ಪ್ರೇರಣೆಯಾಗಿದೆ. ಹೀಗಾಗಿ ಸುಭಾಷ ಚಂದ್ರ ಬೋಸ್‌ರವರ 125ನೇ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಮಂಗಳವಾರ ಬೆಂಗಳೂರಿನಲ್ಲಿ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜಯಂತಿ (ಜನವರಿ 23) ಕಾರ್ಯಕ್ರಮದ ಪೂರ್ವಭಾವಿ ಸಿದ್ಧತೆಗಳ ಕುರಿತು ಹಿರಿಯ ಅಧಿಕಾರಿಗಳೊಂದಿಗೆ ವರ್ಚುವಲ್ ಮೂಲಕ ನಡೆಸಿದ ಸಭೆಯಲ್ಲಿ ಅವರು ಈ ವಿಷಯ ತಿಳಿಸಿದರು.

ಬೆಂಗಳೂರಿನ ಜಕ್ಕೂರಿನ ವೈಮಾನಿಕ ತರಬೇತಿ ಶಾಲೆಯ ಆವರಣದಲ್ಲಿ ಸುಭಾಷ್ ಚಂದ್ರ ಬೋಸ್‌ರವರ 125ನೇ ಜನ್ಮ ದಿನಾಚರಣೆಯನ್ನು ಮಾಡಲು ನಿರ್ಧರಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ನೂರು ಜನ ಎನ್‌ಸಿಸಿ ಕೆಡಿಟ್ ಮತ್ತು ಕಮಾಂಡರ್‌ಗಳು ಭಾಗಿಯಾಗಲಿದ್ದಾರೆ ಎಂದರು.

ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಅವರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಲು ನಿರ್ಧರಿಸಲಾಗಿದೆ. ಇದು ಸುಭಾಷ್ ಚಂದ್ರ ಬೋಸ್‌ರವರ 125ನೇ ಜನ್ಮ ದಿನ. ಹೀಗಾಗಿ ರಾಜ್ಯದ ಎಲ್ಲಾ ಶಾಲೆ ಮತ್ತು ಕಾಲೇಜುಗಳಲ್ಲಿ ವರ್ಷವಿಡೀ ಸುಭಾಷ್ ಚಂದ್ರ ಬೋಸ್ ಅವರ ಕುರಿತಾದ ಕಾರ್ಯಕ್ರಮಗಳನ್ನು ಆಚರಣೆ ಮಾಡಲು ತೀರ್ಮಾನಿಸಲಾಗಿದೆ. ಇದಕ್ಕಾಗಿ ವಿಶೇಷವಾದ ಹಾಗೂ ಅರ್ಥಪೂರ್ಣ ಕಾರ್ಯಕ್ರಮಗಳನ್ನು ರೂಪಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್, ಸಿಎಂ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್, ಕರ್ನಾಟಕ ಗೋವಾ ಎನ್‌ಸಿಸಿ ನಿರ್ದೇಶನಾಲಯದ ಮುಖ್ಯಸ್ಥ ಏರ್ ಕಮಾಂಡರ್ ಬಿ.ಎಸ್. ಕನ್ವರ್ ವರ್ಚುವಲ್ ಸಭೆಯಲ್ಲಿ ಭಾಗವಹಿಸಿದ್ದರು.

 

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

22 hours ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

2 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

2 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

2 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

2 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

2 days ago