ಎಲ್‌ಪಿಜಿ ಪ್ರತಿ ಸಿಲಿಂಡರ್ ಬೆಲೆ 100 ರೂ. ಇಳಿಕೆ -Vishwanews24

Featured, ರಾಷ್ಟ್ರ ನ್ಯೂಸ್

ನವದೆಹಲಿ: ಸಬ್ಸಿಡಿಯೇತರ ಅಡುಗೆ ಅನಿಲದ (ಎಲ್‌ಪಿಜಿ) ಪ್ರತಿ ಸಿಲಿಂಡರ್ ಬೆಲೆಯನ್ನು ₹ 100ರಂತೆ ತಗ್ಗಿಸಲಾಗಿದೆ.

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಬೆಲೆ ಅಗ್ಗವಾಗಿರುವುದರಿಂದ ಬೆಲೆ ಕಡಿತ ಮಾಡಲಾಗಿದೆ ಎಂದು ಸರ್ಕಾರಿ ಸ್ವಾಮ್ಯದ ತೈಲ ಮಾರಾಟ ಸಂಸ್ಥೆ ಇಂಡಿಯನ್‌ ಆಯಿಲ್‌ ಕಾರ್ಪೊರೇಷನ್‌ (ಐಒಸಿ) ತಿಳಿಸಿದೆ. ದೆಹಲಿಯಲ್ಲಿ ಪ್ರತಿ ಸಿಲಿಂಡರ್‌ ಬೆಲೆ ₹ 737.50 ರಿಂದ ₹ 637ಕ್ಕೆ ಇಳಿದಿದೆ.

ಸಬ್ಸಿಡಿ ಸಹಿತ ಎಲ್‌ಪಿಜಿ ಸಿಲಿಂಡರ್‌ ಬೆಲೆಯಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳಲಾಗಿದೆ. ಗೃಹ ಬಳಕೆಗೆ ಒಂದು ಕುಟುಂಬಕ್ಕೆ ವಾರ್ಷಿಕ 12 ಸಿಲಿಂಡರ್‌ಗಳನ್ನು (ಸಬ್ಸಿಡಿ ಸಹಿತ) ಸರ್ಕಾರ ವಿತರಿಸುತ್ತದೆ. ಸಬ್ಸಿಡಿ ಮೊತ್ತವನ್ನು ನೇರವಾಗಿ ಖಾತೆದಾರರ ಬ್ಯಾಂಕ್‌ ಖಾತೆಗೆ ವರ್ಗಾಯಿಸಲಾಗುತ್ತದೆ.