ಎಸೆಸೆಲ್ಸಿ, ಪಿಯುಸಿ ಪರೀಕ್ಷೆಗಳ ಉತ್ತೀರ್ಣತೆ ಅಂಕ ಇಳಿಕೆ : ಬಸವರಾಜ ಹೊರಟ್ಟಿ ಖಂಡನೆ – vishwanews24

Featured, ರಾಜ್ಯ ನ್ಯೂಸ್

ಎಸೆಸೆಲ್ಸಿ, ಪಿಯುಸಿ ಪರೀಕ್ಷೆಗಳ ಉತ್ತೀರ್ಣತೆ ಅಂಕ ಇಳಿಕೆ : ಬಸವರಾಜ ಹೊರಟ್ಟಿ ಖಂಡನೆ

ಬೆಂಗಳೂರು: ಇತ್ತೀಚೆಗೆ ಎಸೆಸೆಲ್ಸಿ ಮತ್ತು ಪಿಯುಸಿ ವಾರ್ಷಿಕ ಪರೀಕ್ಷೆಗಳಲ್ಲಿ ಶೇ.33 ಅಂಕ ತೆಗೆದುಕೊಂಡರೆ ಅಂತಹ ವಿದ್ಯಾರ್ಥಿಗಳನ್ನು ಉತ್ತೀರ್ಣಗೊಳಿಸುವುದಾಗಿ ಸರಕಾರ ಆದೇಶಿಸಿದ್ದು, ಸರಕಾರದ ಈ ನಡೆಯನ್ನು ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಖಂಡಿಸಿದ್ದಾರೆ.

ಬುಧವಾರ ಈ ಸಂಬಂಧ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸಚಿವ ಮಧು ಬಂಗಾರಪ್ಪ ಅವರಿಗೆ ಪತ್ರವನ್ನು ಬರೆದಿರುವ ಅವರು, ಪರೀಕ್ಷೆಗಳನ್ನು ಉತ್ತೀರ್ಣ ಹೊಂದಲು ಈ ಹಿಂದಿನಿಂದ ನಿಗದಿ ಪಡಿಸಿರುವಂತೆ ಶೇ.35 ಅಂಕಗಳು ಸಮಂಜಸವಾಗಿದ್ದು, ದೀರ್ಘಕಾಲದಿಂದ ಸಾಭೀತಾದ ಮಾನದಂಡವಾಗಿರುತ್ತದೆ. ಇಂತಹ ಮಾನದಂಡವನ್ನು ಎಕಾಏಕಿ ಶೇ.33 ಅಂಕಗಳಿಗೆ ಕಡಿತಗೊಳಿಸುವಂತಹ ನಿರ್ಧಾರವು ಸಮಂಜಸವಾದುದಲ್ಲ ಎಂದಿದ್ದಾರೆ.

ಸುಬ್ರಹ್ಮಣ್ಯ : ಚಾಲಕನ ನಿಯಂತ್ರಣ ತಪ್ಪಿ ಮದುವೆ ವಾಹನ ಪಲ್ಟಿ ; 22 ಮಂದಿಗೆ ಗಾಯ – vishwanews24

ಪ್ರೌಢಶಾಲಾ ಮತ್ತು ಪದವಿಪೂರ್ವ ವಿದ್ಯಾರ್ಥಿಗಳು ವಾರ್ಷಿಕ ಪರೀಕ್ಷೆಗಳಲ್ಲಿ ಶೇ.33 ಅಂಕ ತೆಗೆದುಕೊಂಡರೆ ಅಂತಹ ವಿದ್ಯಾರ್ಥಿಗಳನ್ನು ಉತ್ತೀರ್ಣಗೊಳಿಸುವ ನಿರ್ಧಾರವನ್ನು ಕೈಬಿಟ್ಟು, ಮುಂಚೆ ಇದ್ದ ಪದ್ಧತಿಯನ್ನೇ ಸರಕಾರವು ಮುಂದುವರೆಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

Leave a Reply