ಏಪ್ರಿಲ್ 14ರಂದು ಮಂಗಳೂರಿಗೆ ಪ್ರಧಾನಿ ಮೋದಿ – Vishwanews24
ಏಪ್ರಿಲ್ 14ರಂದು ಮಂಗಳೂರಿಗೆ ಪ್ರಧಾನಿ ಮೋದಿ: ಚುನಾವಣಾ ಪ್ರಚಾರ ಸಮಾವೇಶದಲ್ಲಿ ಭಾಗಿ
ಬೆಂಗಳೂರು: ರಾಜ್ಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಚುನಾವಣಾ ಪ್ರಚಾರ ಸಮಾವೇಶ ಚಿಕ್ಕಬಳ್ಳಾಪುರದಿಂದ ಮಂಗಳೂರಿಗೆ ಸ್ಥಳಾಂತರಗೊಂಡಿದೆ. ಅದರಂತೆ, ಏಪ್ರಿಲ್ 14 ರಂದು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಸಮಾವೇಶ ನಡೆಯಲಿದೆ. ಈ ಮೊದಲು ಏಪ್ರಿಲ್ 14 ರಂದು ದೇವನಹಳ್ಳಿಯಲ್ಲಿ ಸಮಾವೇಶ ನಿಗದಿಯಾಗಿತ್ತು. ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ನಡೆಯಬೇಕಿದ್ದ ಸಾರ್ವಜನಿಕ ಸಮಾವೇಶ ಇದೀಗ ಮಂಗಳೂರಿಗೆ ಸ್ಥಳಾಂತರಗೊಂಡಿದೆ.
ಮಂಗಳೂರಿನಲ್ಲಿ ಚುನಾವಣಾ ಪ್ರಚಾರ ಸಮಾವೇಶದಲ್ಲಿ ಭಾಗವಹಿಸಿದ ನಂತರ ಪ್ರಧಾನಿ ಮೋದಿ ಸಂಜೆ ಬೆಂಗಳೂರಿನಲ್ಲಿ ರೋಡ್ ಶೋದಲ್ಲಿ ಭಾಗಿಯಾಗಲಿದ್ದಾರೆ.
ಏಪ್ರಿಲ್ 14ಕ್ಕೆ ಬೆಂಗಳೂರಿಗೆ ಆಗಮಿಸಲಿರುವ ನರೇಂದ್ರ ಮೋದಿ, ಮೊದಲಿಗೆ ಮಧ್ಯಾಹ್ನ 3 ಗಂಟೆಗೆ ಚಿಕ್ಕಬಳ್ಳಾಪುರ ಬಿಜೆಪಿ ಅಭ್ಯರ್ಥಿ ಡಾ. ಕೆ ಸುಧಾಕರ್ ಪರ ಬೃಹತ್ ಸಮಾವೇಶದಲ್ಲಿ ಪಾಲ್ಗೊಳ್ಳುವುದು ಎಂದು ಈ ಹಿಂದೆ ನಿಗದಿಯಾಗಿತ್ತು. ಸಮಾವೇಶ ಮುಗಿದ ನಂತರ ಬೆಂಗಳೂರಿಗೆ ಆಗಮಿಸಿ, ಸಂಜೆ ಶೋಭಾ ಕರಂದ್ಲಾಜೆ ಕ್ಷೇತ್ರವಾದ ಬೆಂಗಳೂರು ಉತ್ತರದಲ್ಲಿ ರೋಡ್ ಶೋ ನಡೆಸುವುದೆಂದು ನಿರ್ಧರಿಸಲಾಗಿತ್ತು. ಆದರೆ, ಇದೀಗ ಚಿಕ್ಕಬಳ್ಳಾಪುರದ ಬದಲು ಮಂಗಳೂರಿನಲ್ಲಿ ಕಾರ್ಯಕ್ರಮ ನಿಗದಿಯಾಗಿದೆ. ನಂತರ ಬೆಂಗಳೂರಿನಲ್ಲಿ ರೋಡ್ ಶೋ ನಿಗದಿಯಂತೆಯೇ ನಡೆಯಲಿದೆ.
ಬೆಂಗಳೂರಿನಿಂದ ಸುಳ್ಯಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಪಲ್ಟಿ; ಇಬ್ಬರಿಗೆ ಗಾಯ – Vishwanews24
