ಏಪ್ರಿಲ್ 6 ಮತ್ತು 7 ರಂದು ಬಿಜೆಪಿ ಅಭ್ಯರ್ಥಿ ಪಟ್ಟಿ ಘೋಷಣೆ : ಪ್ರಹ್ಲಾದ್ ಜೋಶಿ – Vishwanews24
ಏಪ್ರಿಲ್ 6 ಮತ್ತು 7 ರಂದು ಬಿಜೆಪಿ ಅಭ್ಯರ್ಥಿ ಪಟ್ಟಿ ಘೋಷಣೆ : ಪ್ರಹ್ಲಾದ್ ಜೋಶಿ
ಬೆಳಗಾವಿ: ವಿಧಾನಸಭೆ ಚುನಾವಣೆ ಘೋಷಣೆಯಾಗುತ್ತಿದ್ದಂತೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಸಿದ್ಧವಾಗಿದೆ. ಏಪ್ರಿಲ್ 6 ಮತ್ತು 7 ರಂದು ಬಿಜೆಪಿ ಅಭ್ಯರ್ಥಿ ಪಟ್ಟಿ ಘೋಷಣೆ ಸಾಧ್ಯತೆ ಇದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ಪಕ್ಷದ ಅಭ್ಯರ್ಥಿಗಳ ಆಯ್ಕೆ ಬಗ್ಗೆ ಅಭಿಪ್ರಾಯ ಸಂಗ್ರಹವಾಗುತ್ತದೆ. ಶೀಘ್ರದಲ್ಲೇ ಅಭ್ಯರ್ಥಿ ಪಟ್ಟಿ ರಿಲೀಸ್ ಆಗಲಿದೆ ಎಂದರು.
ಗ್ಯಾರಂಟಿ ಕಾರ್ಡ್ ತೋರಿಸಿ ಕಾಂಗ್ರೆಸ್ ಜನರಿಗೆ ಸುಳ್ಳು ಆಶ್ವಾಸನೆ ನೀಡುತ್ತಿದೆ. ಕಾಂಗ್ರೆಸ್ ನ ಸುಳ್ಳಿನ ಆಶ್ವಾಸನೆಗಳನ್ನು ಜನ ನಂಬುವುದಿಲ್ಲ. ಈ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲುವುದು ನಿಶ್ಚಿತವಾಗಿದೆ. ರಾಜ್ಯದಲ್ಲಿ ಸ್ಪಷ್ಟ ಬಹುಮತದೊಂದಿಗೆ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಹೊಸದಿಲ್ಲಿಯಲ್ಲಿ ರಾಷ್ಟ್ರಪತಿಗಳ ಜತೆ ಸಂವಾದ : ಬಂಟ್ವಾಳ, ಉಡುಪಿಯ ಆರು ಮಂದಿ ಭಾಗಿ – Vishwanews24
