ಒಂದನೇ ತರಗತಿ ದಾಖಲಾತಿಗೆ 6 ವರ್ಷ ವಯಸ್ಸು ಕಡ್ಡಾಯ ನಿಯಮ ಸಡಿಲಿಕೆ ಸಾಧ್ಯವಿಲ್ಲ: ಮಧು ಬಂಗಾರಪ್ಪ – vishwanews24

Featured, ರಾಜ್ಯ ನ್ಯೂಸ್

ಒಂದನೇ ತರಗತಿ ದಾಖಲಾತಿಗೆ 6 ವರ್ಷ ವಯಸ್ಸು ಕಡ್ಡಾಯ ನಿಯಮ ಸಡಿಲಿಕೆ ಸಾಧ್ಯವಿಲ್ಲ: ಮಧು ಬಂಗಾರಪ್ಪ

ಬೆಂಗಳೂರು:ಒಂದನೇ ತರಗತಿ ದಾಖಲಾತಿಗೆ 6 ವರ್ಷ ವಯಸ್ಸು ಕಡ್ಡಾಯ ನಿಯಮ ಸಡಿಲಿಕೆ ಸಾಧ್ಯವಿಲ್ಲ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು.

ಈ ಕುರಿತು ಮಾತನಾಡಿದ ಅವರು, 6 ವರ್ಷದ ನಿಯಮ ಸಡಿಲಿಕೆ ಸಾಧ್ಯವಿಲ್ಲ. ಅನೇಕರು ಈ ಸಂಬಂಧ ಕೋರ್ಟ್ ಮೊರೆ ಹೋಗಿದ್ದಾರೆ. ಕೋರ್ಟ್ ಕೂಡಾ ಅವರ ಅರ್ಜಿ ವಜಾ ಮಾಡಿದೆ. ಕೋರ್ಟ್ನಲ್ಲಿ ಏನೇ ಆದೇಶ ಬಂದರೂ ನಾವು ಪಾಲನೆ ಮಾಡುವುದಾಗಿ ಹೇಳಿದರು.

ನಿಯಮದ ಪ್ರಕಾರ ನಾವು ನಡೆಯಬೇಕು 1 ತಿಂಗಳು, 2 ತಿಂಗಳು ಕಡಿಮೆ ಇರೋರಿಗೆ ಕೊಟ್ಟರೆ ಮತ್ತೊಬ್ಬರು ಕೇಳುತ್ತಾರೆ. ಇದೆಲ್ಲವೂ ಬಹಳ ಚರ್ಚೆ ಆಗೋ ವಿಷಯ. ಎಷ್ಟೋ ಪೋಷಕರು 7 ದಿನ ಕಡಿಮೆ ಅಂತಿದ್ದಾರೆ. ಆದರೆ ಅದು ಕಾನೂನಿನಲ್ಲಿ ಇಲ್ಲ‌. ನಾವು ಅದನ್ನು ಪರಿಗಣಿಸಲು ಸಾಧ್ಯವಿಲ್ಲ.. ಕೋರ್ಟ್ ನಲ್ಲಿ ನಿರ್ಧಾರ ಬಂದರೆ ನಾವು ತೀರ್ಮಾನ ಮಾಡಬಹುದು ಎಂದು ತಿಳಿಸಿದರು.

ಬಂಟ್ವಾಳ: ಪಿಯುಸಿ ವಿದ್ಯಾರ್ಥಿ ನಾಪತ್ತೆ ಪ್ರಕರಣ: ವಿವಿಧ ಸಂಘಟನೆಗಳಿಂದ ಫರಂಗಿಪೇಟೆ ಜಂಕ್ಷನ್ ನಲ್ಲಿ ಬೃಹತ್ ಪ್ರತಿಭಟನೆ – vishwanews24

Leave a Reply