ಒಂದು ತಿಂಗಳವರೆಗೆ ಕಾಂಗ್ರೆಸ್ ಪ್ರತಿನಿಧಿಗಳನ್ನು ಯಾವುದೇ ಕಾರ್ಯಕ್ರಮಗಳಿಗೆ ಆಹ್ವಾನಿಸಬೇಡಿ : ರಣದೀಪ್ ಸುರ್ಜೇವಾಲಾ -Vishwanews24
ನವದೆಹಲಿ, –ಕಾಂಗ್ರೆಸ್ ಜನಪ್ರತಿನಿಧಿಗಳು ಒಂದು ತಿಂಗಳವರೆಗೆ ಯಾವುದೇ ಸುದ್ದಿವಾಹಿನಿಗಳಲ್ಲಿ ಭಾಗವಹಿಸುವುದು ಬೇಡ ಎಂದು ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ವಕ್ತಾರ ರಣದೀಪ್ ಸುರ್ಜೇವಾಲಾ ಹೇಳಿದ್ದಾರೆ. ಅದೇ ವೇಳೆ ಕಾಂಗ್ರೆಸ್ ಪ್ರತಿನಿಧಿಗಳನ್ನು ಯಾವುದೇ ಕಾರ್ಯಕ್ರಮಗಳಿಗೆ ಆಹ್ವಾನಿಸಬೇಡಿ ಎಂದು ಸುರ್ಜೇವಾಲಾ ಸುದ್ದಿಮಾಧ್ಯಮಗಳಿಗೆ ಹೇಳಿದ್ದಾರೆ.
ಈ ಸಂದರ್ಭದಲ್ಲಿ ಪಕ್ಷದ ನಾಯಕರು, ಪ್ರತಿನಿಧಿ ಮತ್ತು ವಕ್ತಾರರು ಯಾವುದೇ ರೀತಿಯ ಬಹಿರಂಗ ಹೇಳಿಕೆಗಳನ್ನು ನೀಡದಂತೆ ತಡೆಯಲು ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ.
.@INCIndia has decided to not send spokespersons on television debates for a month.
All media channels/editors are requested to not place Congress representatives on their shows.
— Randeep Singh Surjewala (@rssurjewala) May 30, 2019
ಒಂದು ತಿಂಗಳ ಕಾಲ ಸುದ್ದಿವಾಹಿನಿಗಳ ಜತೆ ಚರ್ಚೆ, ಮಾತುಕತೆ ಅಥವಾ ಮುಕ್ತ ಬಹಿರಂಗ ಹೇಳಿಕೆಗಳನ್ನು ನೀಡದಂತೆ ಪಕ್ಷದ ವಕ್ತಾರರು ಮತ್ತು ಇತರ ಪ್ರತಿನಿಧಿಗಳಿಗೆ ಕಟ್ಟಪ್ಪಣೆ ಮಾಡಿದೆಯಲ್ಲದೆ ಅವರನ್ನು ವಾರ್ತಾವಾಹಿನಿಗಳಲ್ಲಿ ಸಂವಾದಕ್ಕೆ ಕಳುಹಿಸದಿರಲು ನಿರ್ಧರಿಸಿದೆ.
ಕಾಂಗ್ರೆಸ್ ಪಕ್ಷದ ಪ್ರತಿನಿಧಿಗಳನ್ನು ತಮ್ಮ ಕಾರ್ಯಕ್ರಮಗಳಲ್ಲಿ ನಿಯೋಜಿಸದಂತೆ ಎಲ್ಲಾ ಸುದ್ದಿ ಮಾಧ್ಯಮಗಳಿಗೆ, ಸಂಪಾದಕರು ಮನವಿ ಮಾಡುತ್ತೇವೆ ಎಂದು ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಮುಖ್ಯಸ್ಥ ರಣದೀಪ್ ಸಿಂಗ್ ಸುರ್ಜೆವಾಲಾ ತಿಳಿಸಿದ್ದಾರೆ.
