ಒಮಿಕ್ರಾನ್ : ಶಾಲಾ-ಕಾಲೇಜು ಮಕ್ಕಳ ಪೋಷಕರು, ಸಿಬ್ಬಂದಿಗೂ 2 ಡೋಸ್ ಲಸಿಕೆ ಕಡ್ಡಾಯ : ಸಿಎಂ ಬೊಮ್ಮಾಯಿ – Vishwanews24

Featured, ರಾಜ್ಯ ನ್ಯೂಸ್

ಒಮಿಕ್ರಾನ್ : ಶಾಲಾ-ಕಾಲೇಜು ಮಕ್ಕಳ ಪೋಷಕರು, ಸಿಬ್ಬಂದಿಗೂ 2 ಡೋಸ್ ಲಸಿಕೆ ಕಡ್ಡಾಯ : ಸಿಎಂ ಬೊಮ್ಮಾಯಿ – Vishwanews24

ಬೆಂಗಳೂರು : ರಾಜ್ಯದಲ್ಲಿ ಈಗಾಗಲೇ ಒಮಿಕ್ರಾನ್ ಸೋಂಕು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು  ಮಹತ್ವದ ಕ್ರಮಗಳನ್ನು ಕೈಗೊಂಡಿದ್ದು, ಶಾಲಾ-ಕಾಲೇಜು ಮಕ್ಕಳ ಪೋಷಕರು, ಸಿಬ್ಬಂದಿಗೂ 2 ಡೋಸ್ ಲಸಿಕೆ ಕಡ್ಡಾಯ ಮಾಡಲಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ  ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಒಮಿಕ್ರಾನ್ ಸೋಂಕು ವೇಗವಾಗಿ ಹರಡುತ್ತೆ ಎನ್ನುತ್ತಿದ್ದಾರೆ. ಆದರೆ ಒಮಿಕ್ರಾನ್ ಪರಿಣಾಮ ಮಾತ್ರ ಕಡಿಮೆ ಇದೆ. ಒಮಿಕ್ರಾನ್ ಸೋಂಕಿನ ಬಗ್ಗೆ ಮಾಹಿತಿ ಸಂಗ್ರಹಿಸಲಾಗುತ್ತಿದೆ. ಒಮಿಕ್ರಾನ್ ಸೋಂಕಿಗೆ ಹೇಗೆ ಚಿಕಿತ್ಸೆ ನೀಡಬೇಕು ಎಂಬುದರ ಕುರಿತು ಮಾಹಿತಿ ಪಡೆಯಲಾಗುತ್ತಿದೆ ಎಂದರು.

ಇನ್ನು ಮೊದಲ ಕೊರನಾ ಪ್ರಕರಣಗಳಿಗೆ ಕ್ಲಸ್ಟರ್ ಎಂದು ಕರೆಯಲಾಗುತ್ತಿತ್ತು. ಈಗ 3 ಪ್ರಕರಣಗಳಿಗೆ ಕ್ಲಸ್ಟರ್ ಮಾಡಲಾಗುತ್ತಿದೆ. ಅಪಾರ್ಟ್ ಮೆಂಟ್ ಭೇಟಿಗೂ ಇನ್ಮುಂದೆ 2 ಡೋಸ್ ಲಸಿಕೆ ಕಡ್ಡಾಯ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಯುವಕರೆಲ್ಲರೂ ಮೋದಿ… ಮೋದಿ… ಮೋದಿ… ಅಂತಿದ್ರು , ಈಗ ಮೋದಿ ಎಲ್ಲರಿಗೂ ತಿರುಪತಿ ತಿಮ್ಮಪ್ಪನ 3 ನಾಮ ಹಾಕಿದ್ದಾರೆ : ಸಿದ್ದರಾಮಯ್ಯ – Vishwanews24