ಕಟಪಾಡಿ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಗುದ್ದಿದ ಕಾರು -vishwanews24

Featured, ಉಡುಪಿ

ಕಟಪಾಡಿ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಗುದ್ದಿದ ಕಾರು -vishwanews24

ಕಾಪು: ರಾಷ್ಟ್ರೀಯ ಹೆದ್ದಾರಿ66 ಕಟಪಾಡಿ ಮೂಡಬೆಟ್ಟು ಕಂಬಳ ದ ಬಳಿ ಕಾರು ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಗುದ್ದಿದ ಘಟನೆ ಆದಿತ್ಯವಾರ ನಡೆದಿದೆ.
ಮಂಗಳೂರು ಕಡೆಯಿಂದ ಉಡುಪಿ ಕಡೆಗೆ ಸಾಗುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಹೆದ್ದಾರಿ ಪಕ್ಕದ ವಿದ್ಯುತ್ ಕಂಬಕ್ಕೆ ಗುದ್ದಿದೆ.
ಈ ಪರಿಣಾಮವಾಗಿ ವಿದ್ಯುತ್ ಕಂಬಗಳು ತುಂಡಾಗಿ ಉರುಳಿ ಬಿದ್ದಿದ್ದು ಸ್ಥಳಕ್ಕೆ ಕಾಪು ಪೊಲೀಸರು ಹಾಗೂ ಮೆಸ್ಕಾಂ ಸಿಬ್ಬಂದಿಗಳು ಪರಿಶೀಲನೆ ನಡೆಸಿದರು.