ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿದ ರಿಯಲ್ ಸ್ಟಾರ್ ಉಪೇಂದ್ರ – vishwanews24
ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿದ ರಿಯಲ್ ಸ್ಟಾರ್ ಉಪೇಂದ್ರ
ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ‘ಯುಐ’ ಟೀಮ್ ಜೊತೆ ಉಪೇಂದ್ರ ಭೇಟಿ ನೀಡಿದ್ದಾರೆ.
‘ಯುಐ’ ವಾರ್ನರ್ಗೆ ಅಭಿಮಾನಿಗಳಿಂದ ಉತ್ತರ ರೆಸ್ಪಾನ್ಸ್ ಸಿಕ್ಕಿದೆ. ಸಿನಿಮಾ ರಿಲೀಸ್ಗೂ ಸಿದ್ಧವಾಗಿದೆ. ಈ ಹಿನ್ನೆಲೆ, ಉಪೇಂದ್ರ ಅವರು ಶಕ್ತಿ ದೇವತೆ ದುರ್ಗಾಪರಮೇಶ್ವರಿ ದೇವಿಯ ಆಶೀರ್ವಾದ ಪಡೆದಿದ್ದಾರೆ. ದೇವಿಗೆ ಪೂಜೆ ಸಲ್ಲಿಸಿ, ಕೆಲ ಕಾಲ ದೇವಸ್ಥಾನದಲ್ಲಿ ಸಮಯ ಕಳೆದಿದ್ದಾರೆ. ನಂತರ ಉಪೇಂದ್ರ & ಟೀಮ್ ಕೊರಗಜ್ಜ ದೈವದ ದರ್ಶನ ಪಡೆದಿದ್ದಾರೆ.
ಉಪೇಂದ್ರ ಜೊತೆ ನಿರ್ಮಾಪಕ ಕೆ.ಪಿ ಶ್ರೀಕಾಂತ್, ಲಹರಿ ವೇಲು ಹಾಗೂ ನವೀನ್ ಮನೋಹರನ್ ಕೂಡ ದೇವರ ದರ್ಶನ ಪಡೆದಿದ್ದಾರೆ. ಈ ವೇಳೆ, ಉಪೇಂದ್ರ ಜೊತೆಗಿನ ಸೆಲ್ಫಿಗಾಗಿ ಅಭಿಮಾನಿಗಳು ಮುಗಿಬಿದ್ದಿದ್ದಾರೆ. ಇನ್ನೂ ಇಂದು (ಡಿ.3) ಸಂಜೆ ಮಂಗಳೂರಿನಲ್ಲಿ ನಡೆಯಲಿರುವ ‘ಯುಐ’ ಚಿತ್ರದ ಪತ್ರಿಕಾಗೋಷ್ಠಿಯಲ್ಲಿ ಪಾಲ್ಗೊಳ್ಳಲಿದೆ ಚಿತ್ರತಂಡ.
