ಕಟೀಲು ದುರ್ಗಾ ಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿದ ಸ್ಯಾಂಡಲ್ವುಡ್ ಹಿರಿಯ ನಟಿ ತಾರಾ – Vishwanews24
ಕಟೀಲು ದುರ್ಗಾ ಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿದ ಸ್ಯಾಂಡಲ್ವುಡ್ ಹಿರಿಯ ನಟಿ ತಾರಾ
ಸ್ಯಾಂಡಲ್ವುಡ್ನ ಹಿರಿಯ ನಟಿ ತಾರಾ ಅನುರಾಧ ಇದೀಗ ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ತಮ್ಮ ಎಲ್ಲಾ ಕೆಲಸಕ್ಕೆ ಬ್ರೇಕ್ ಹಾಕಿ, ದೇವರ ಸನ್ನಿಧಾನಕ್ಕೆ ನಟಿ ತೆರಳಿದ್ದಾರೆ.
ಡಿಸೆಂಬರ್ 2ರಂದು ತಾರಾ ಕಟೀಲಿನ ಪುಣ್ಯ ಕ್ಷೇತ್ರ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದ್ದಾರೆ. ದರ್ಶನ ಪಡೆದು ಪ್ರಸಾದ ಸ್ವೀಕರಿಸಿದ್ದಾರೆ.
