ಕನ್ನಡದ ಖ್ಯಾತ ಹಿರಿಯ ನಟಿ ಲೀಲಾವತಿ ಇನ್ನಿಲ್ಲ – vishwanews24

Featured, ರಾಜ್ಯ ನ್ಯೂಸ್

ಕನ್ನಡದ ಖ್ಯಾತ ಹಿರಿಯ ನಟಿ ಲೀಲಾವತಿ ನಿಧನ

ಬೆಂಗಳೂರು : ಕನ್ನಡದ ಖ್ಯಾತ ಹಿರಿಯ ನಟಿ ಲೀಲಾವತಿ ಅವರು ಇಂದು ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.

ಲೀಲಾವತಿ ಅವರು ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಹಾಸಿಗೆ ಹಿಡಿದಿದ್ದರು. ಈ ನಡುವೆ ಅವರ ಆರೋಗ್ಯದಲ್ಲಿ ಮತ್ತೆ ಸಮಸ್ಯೆ ಕಾಣಿಸಿಕೊಂಡಿದ್ದರ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ ಎರಡು ದಿನಗಳಿಂದ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡಿತ್ತು. ಇಂದು ಮಧ್ಯಾಹ್ನ ದಿಢೀರ್ ಅಂತ ಲೋ ಬಿಪಿ ಸಮಸ್ಯೆ ಶುರುವಾಗಿದೆ. ತಕ್ಷಣವೇ ಅವರನ್ನು ನೆಲಮಂಗಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಲೀಲಾವತಿ ನಿಧನರಾಗಿದ್ದಾರೆ.

ಉಡುಪಿ : ಹಾಸ್ಟೆಲ್ ವಾರ್ಡನ್ ನಾಪತ್ತೆ – vishwanews24

87 ವರ್ಷದ ಲೀಲಾವತಿ ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದಾರೆ. ನಟ ದರ್ಶನ್, ಅಂಬರೀಶ್, ಗಿರಿಜಾ ಲೋಕೇಶ್ ಸೇರಿದಂತೆ ಅನೇಕರು ಆಗಮಿಸಿದ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಅವರು ಕೂಡ ನೆಲಮಂಗಲ ತಾಲೂಕಿನ ಸೋಲದೇವನಹಳ್ಳಿಯ ತೋಟ ಮನೆಗೆ ಭೇಟಿ ನೀಡಿ ಲೀಲಾವತಿ ಅವರ ಆರೋಗ್ಯ ವಿಚಾರಿಸಿದ್ದರು.

Leave a Reply