ಕನ್ನಡದ ಹಿರಿಯ ನಟ ಮಂದೀಪ್ ರಾಯ್ ಹೃದಯಾಘಾತದಿಂದ ನಿಧನ -Vishwanews24

Featured, ರಾಜ್ಯ ನ್ಯೂಸ್

ಕನ್ನಡದ ಹಿರಿಯ ನಟ ಮಂದೀಪ್ ರಾಯ್ ಹೃದಯಾಘಾತದಿಂದ ನಿಧನ

ಬೆಂಗಳೂರು: ಕನ್ನಡದ ಹಿರಿಯ ನಟ ಮಂದೀಪ್ ರಾಯ್ ನಿಧನರಾಗಿದ್ದಾರೆ. ಕಳೆದ ಮಧ್ಯರಾತ್ರಿ 1.45ರ ಸುಮಾರಿಗೆ ಬೆಂಗಳೂರಿನ ಭೈರಸಂದ್ರದಲ್ಲಿರುವ ಅವರ ನಿವಾಸದಲ್ಲಿ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 73 ವರ್ಷ ವಯಸ್ಸಾಗಿತ್ತು.

ಕಳೆದ ಡಿಸೆಂಬರ್ ತಿಂಗಳಲ್ಲಿ ಮಂದೀಪ್ ರಾಯ್ ಹೃದಯಾಘಾತದಿಂದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದರು. ಕನ್ನಡದ ಖ್ಯಾತ ನಟರಾದ ಅನಂತ್ ನಾಗ್, ಶಂಕರ್ ನಾಗ್, ರಾಜ್ ಕುಮಾರ್, ವಿಷ್ಣುವರ್ಧನ್ ಸೇರಿ ಅನೇಕ ನಾಯಕನಟರು, ಪ್ರಮುಖ ನಟರ ಜೊತೆ ಮಂದೀಪ್ ರಾಯ್ ಇದುವರೆಗೆ 500ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ.

ಮಂದೀಪ್ ರಾಯ್ ಹಾಸ್ಯ ಪಾತ್ರಗಳಲ್ಲಿ ಹೆಚ್ಚು ಮಿಂಚಿದ್ದಾರೆ.

Leave a Reply