ಕನ್ನಡದ ಹಿರಿಯ ಸಾಹಿತಿ, ಭಾಷಾತಜ್ಞ ಪ್ರೊ. ಕೆ.ವಿ. ನಾರಾಯಣ ನಿಧನ – vishwanews24

Featured, ರಾಜ್ಯ ನ್ಯೂಸ್

ಕನ್ನಡದ ಹಿರಿಯ ಸಾಹಿತಿ, ಭಾಷಾತಜ್ಞ ಪ್ರೊ. ಕೆ.ವಿ. ನಾರಾಯಣ ನಿಧನ

ಬೆಂಗಳೂರು: ಕನ್ನಡದ ಖ್ಯಾತ ಚಿಂತಕ, ಭಾಷಾವಿಜ್ಞಾನಿ ಮತ್ತು ಹಿರಿಯ ಸಾಹಿತ್ಯ ವಿಮರ್ಶಕ ಪ್ರೊ. ಕೆ.ವಿ. ನಾರಾಯಣ (79) ಅವರು ನಿಧನರಾಗಿದ್ದಾರೆ.

ನಗರದ ಯಲಹಂಕದಲ್ಲಿ ನೆಲೆಸಿದ್ದ ನಾರಾಯಣ  ಅವರಿಗೆ ಗುರುವಾರ ತಡರಾತ್ರಿ ಆರೋಗ್ಯದಲ್ಲಿ ತೀವ್ರ ಏರುಪೇರು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದರು. ಮೃತರು ಪತ್ನಿ ಎಚ್.ಎಸ್. ಶ್ರೀಮತಿ, ಓರ್ವ ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ.

ಮಂಗಳೂರು: ಗಾಂಜಾ ಮಾರಾಟ ಮಾಡುತ್ತಿದ್ದ ಯುವಕನ ಬಂಧನ – vishwanews24

ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲ್ಲೂಕಿನ ಕಂಪಲಾಪುರದಲ್ಲಿ 1948ರಲ್ಲಿ ಜನಿಸಿದ ಕೆ.ವಿ. ನಾರಾಯಣ ಅವರು, ಬೆಂಗಳೂರು ವಿಶ್ವವಿದ್ಯಾಲಯದಿಂದ ಕನ್ನಡದಲ್ಲಿ ಎಂ.ಎ. ಸ್ನಾತಕೋತ್ತರ ಪದವಿ ಪಡೆದರು. ಬಳಿಕ ಖ್ಯಾತ ಸಾಹಿತಿ ರಾಷ್ಟ್ರಕವಿ ಡಾ. ಜಿ.ಎಸ್. ಶಿವರುದ್ರಪ್ಪ ಅವರ ಮಾರ್ಗದರ್ಶನದಲ್ಲಿ ಪಿಎಚ್.ಡಿ ಸಂಶೋಧನೆ ಪೂರ್ಣಗೊಳಿಸಿದರು.

ಬೆಂಗಳೂರಿನ ನ್ಯಾಷನಲ್ ಕಾಲೇಜಿನಲ್ಲಿ ಅಧ್ಯಾಪಕರಾಗಿ ಶೈಕ್ಷಣಿಕ ವೃತ್ತಿ ಆರಂಭಿಸಿದ ಅವರು ಬೆಂಗಳೂರು ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ಕೇಂದ್ರದಲ್ಲಿ ಭಾಷಾವಿಜ್ಞಾನ ಮತ್ತು ಸಾಹಿತ್ಯ ಮೀಮಾಂಸೆಯ ಪ್ರಾಧ್ಯಾಪಕರಾಗಿ ದೀರ್ಘಕಾಲ ಬೋಧನೆ ಮಾಡಿದರು. ಹಂಪಿಯ ಕನ್ನಡ ವಿಶ್ವವಿದ್ಯಾಲಯದಲ್ಲಿ ಭಾಷಾ ನಿಕಾಯದ ಡೀನ್, ಕುಲಸಚಿವ ಹಾಗೂ ಪ್ರಭಾರ ಕುಲಪತಿಯಂತಹ ಉನ್ನತ ಹುದ್ದೆಗಳನ್ನು ಯಶಸ್ವಿಯಾಗಿ ನಿಭಾಯಿಸಿ, ಆಡಳಿತಾತ್ಮಕ ಮತ್ತು ಶೈಕ್ಷಣಿಕ ಚಟುವಟಿಕೆಗಳಿಗೆ ಭದ್ರ ಬುನಾದಿ ಹಾಕಿಕೊಟ್ಟರು.

ಕೆಎಸ್‌ಆರ್‌ಟಿಸಿ ಪ್ರಯಾಣ ದರ ಹೆಚ್ಚಳ: ಉಡುಪಿ, ದಕ್ಷಿಣ ಕನ್ನಡ ಮಾರ್ಗಗಳ ದರಪಟ್ಟಿ – vishwanews24

Leave a Reply