ಕನ್ನಡಿಗನಿಗೆ ಕನ್ನಡ ಧ್ವಜ ಭಗವಾಧ್ವಜಕ್ಕೂ ಮಿಗಿಲು ; ಬೆಳಗಾವಿ ಕನ್ನಡ ವಿರೋಧಿ ಪುಂಡರ ವಿರುದ್ಧ ಸರ್ಕಾರ ಕೂಡಲೇ ಕ್ರಮ ಕೈಗೊಳ್ಳಬೇಕು: ಕುಮಾರಸ್ವಾಮಿ -Vishwanews24
ಕನ್ನಡಿಗನಿಗೆ ಕನ್ನಡ ಧ್ವಜ ಭಗವಾಧ್ವಜಕ್ಕೂ ಮಿಗಿಲು ; ಬೆಳಗಾವಿ ಕನ್ನಡ ವಿರೋಧಿ ಪುಂಡರ ವಿರುದ್ಧ ಸರ್ಕಾರ ಕೂಡಲೇ ಕ್ರಮ ಕೈಗೊಳ್ಳಬೇಕು: ಕುಮಾರಸ್ವಾಮಿ -Vishwanews24
ಬೆಂಗಳೂರು : ಕನ್ನಡ ಧ್ವಜವೆಂಬುದೇನಾದರೂ ಭಗವಾಧ್ವಜಕ್ಕೆ ವಿರುದ್ಧಾರ್ಥಕವೇ? ಕನ್ನಡಿಗನಿಗೆ ಕನ್ನಡ ಧ್ವಜ ಭಗವಾಧ್ವಜಕ್ಕೂ ಮಿಗಿಲು , ಬೆಳಗಾವಿ ಕನ್ನಡ ವಿರೋಧಿ ಪುಂಡರ ವಿರುದ್ಧ ಸರ್ಕಾರ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ, ಬೆಳಗಾವಿ ಪಾಲಿಕೆ ಎದುರಿನ ಕನ್ನಡ ಧ್ವಜ ತೆರವು ಮಾಡದಿದ್ದರೆ ಗಲ್ಲಿಗಳಲ್ಲಿ ಭಗವಾಧ್ವಜ ಹಾರಿಸುವುದಾಗಿ ಎಂಇಎಸ್ ಬೆದರಿಸಿದೆ. ಕನ್ನಡ ಧ್ವಜವನ್ನು ತೆಗೆಯಬೇಕೆಂಬುದೇ ಅಪರಾಧ. ಇನ್ನು ಬೆದರಿಕೆ ಹಾಕುವುದು ಅಕ್ಷಮ್ಯ. ಅಷ್ಟಕ್ಕೂ ಕನ್ನಡ ಧ್ವಜವೆಂಬುದೇನಾದರೂ ಭಗವಾಧ್ವಜಕ್ಕೆ ವಿರುದ್ಧಾರ್ಥಕವೇ? ಕನ್ನಡಿಗನಿಗೆ ಕನ್ನಡ ಧ್ವಜ ಭಗವಾಧ್ವಜಕ್ಕೂ ಮಿಗಿಲು ಎಂದು ಹೇಳಿದ್ದಾರೆ.
ಬೆಳಗಾವಿ ಪಾಲಿಕೆ ಎದುರಿನ ಕನ್ನಡ ಧ್ವಜ ತೆರವು ಮಾಡದಿದ್ದರೆ ಗಲ್ಲಿಗಳಲ್ಲಿ ಭಗವಾಧ್ವಜ ಹಾರಿಸುವುದಾಗಿ ಎಂಇಎಸ್ ಬೆದರಿಸಿದೆ. ಕನ್ನಡ ಧ್ವಜವನ್ನು ತೆಗೆಯಬೇಕೆಂಬುದೇ ಅಪರಾಧ. ಇನ್ನು ಬೆದರಿಕೆ ಹಾಕುವುದು ಅಕ್ಷಮ್ಯ. ಅಷ್ಟಕ್ಕೂ ಕನ್ನಡ ಧ್ವಜವೆಂಬುದೇನಾದರೂ ಭಗವಾಧ್ವಜಕ್ಕೆ ವಿರುದ್ಧಾರ್ಥಕವೇ? ಕನ್ನಡಿಗನಿಗೆ ಕನ್ನಡ ಧ್ವಜ ಭಗವಾಧ್ವಜಕ್ಕೂ ಮಿಗಿಲು.
1/2— H D Kumaraswamy (@hd_kumaraswamy) January 5, 2021
ಬೆಳಗಾವಿಯಲ್ಲಿ ಕನ್ನಡ ಧ್ವಜದ ವಿಚಾರದಲ್ಲಿ ನಡೆಯುತ್ತಿರುವ ಕಿತಾಪತಿಗಳನ್ನು ಸರ್ಕಾರ ನೋಡಿಯೂ ಸುಮ್ಮನಿದೆಯೇ? ಅಥವಾ ‘ಕನ್ನಡಿಗರಿಗೆ ಸರ್ಕಾರ ಹೆದರಬಾರದು’ ಎಂದು ಬಿಜೆಪಿ ಶಾಸಕರೊಬ್ಬರು ಹಿಂದೆ ಹೇಳಿದ್ದ ಮಾತನ್ನು ಸರ್ಕಾರ ಗಂಭೀರವಾಗಿ ತೆಗೆದುಕೊಂಡಿದೆಯೇ? ಬೆಳಗಾವಿಯ ಕನ್ನಡ ವಿರೋಧಿ ಪುಂಡರ ವಿರುದ್ಧ ಸರ್ಕಾರ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
