ಕನ್ನಡ ಮಾಧ್ಯಮದಲ್ಲಿ ಇಂಜಿನಿಯರಿಂಗ್ ಶಿಕ್ಷಣಕ್ಕೆ ನಾಲ್ಕು ಕಾಲೇಜುಗಳಿಗೆ ಅನುಮತಿ : ಸಿಎಂ ಬಸವರಾಜ ಬೊಮ್ಮಾಯಿ -Vishwanews24

Featured, ರಾಜ್ಯ ನ್ಯೂಸ್

ಕನ್ನಡ ಮಾಧ್ಯಮದಲ್ಲಿ ಇಂಜಿನಿಯರಿಂಗ್ ಶಿಕ್ಷಣಕ್ಕೆ ನಾಲ್ಕು ಕಾಲೇಜುಗಳಿಗೆ ಅನುಮತಿ : ಸಿಎಂ ಬಸವರಾಜ ಬೊಮ್ಮಾಯಿ -Vishwanews24

ಬೆಂಗಳೂರು : ಇಂಜಿಯರಿಂಗ್​ ಕಾಲೇಜುಗಳಲ್ಲಿ ( engineering college) 4 ವರ್ಷದ ಬಿಎಸ್ಸಿ ಆನರ್ಸ್ ಆರಂಭಿಸಲು ಅನುಮತಿ ಪತ್ರ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ

ಬ್ಯಾಂಕ್ವೆಟ್​ ಹಾಲ್​ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾಗಿಯಾಗಿದ್ದು, ಇಂಜಿಯರಿಂಗ್​ ಕಾಲೇಜುಗಳಲ್ಲಿ 4 ವರ್ಷದ ಬಿಎಸ್ಸಿ ಆನರ್ಸ್ ಆರಂಭಿಸಲು ಅನುಮತಿ ಪತ್ರ ನೀಡಲಾಗಿದೆನೂತನ ಶಿಕ್ಷಣ ಪದ್ಧತಿ (NEP) ಅನುಸಾರ ಜಿನಿಯರಿಂಗ್ ಶಿಕ್ಷಣ ಅನುಷ್ಠಾನ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿತಿಳಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಇಂಜಿನಿಯರಿಂಗ್ ಸಿಲಬಸ್ ಬಿಡುಗಡೆ ಮಾಡಿರುವುದು ಹೊಸ ಅಧ್ಯಾಯವಾಗಿದೆ. ಇದೊಂದು ಐತಿಹಾಸಿಕ ದಿನ ಎಂದು ಸಿಎಂ ಬೊಮ್ಮಾಯಿ ಸಂತಸ ಹಂಚಿಕೊಂಡಿದ್ದಾರೆ. ಕನ್ನಡ ಮಾಧ್ಯಮದಲ್ಲಿ ಇಂಜಿನಿಯರಿಂಗ್ ಶಿಕ್ಷಣಕ್ಕೆ ಒಪ್ಪಿಗೆ ನೀಡಲಾಗಿದೆ. ಈ ಸಂಬಂಧ ನಾಲ್ಕು ಕಾಲೇಜುಗಳಿಗೆ ಅನುಮತಿ ಪತ್ರವನ್ನು ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಕಾರ್ಯಕ್ರಮದಲ್ಲಿ ಉನ್ನತ ಶಿಕ್ಷಣ ಸಚಿವ ಡಾ: ಸಿ.ಎನ್.ಅಶ್ವತ್ಥ್ ನಾರಾಯಣ್, ( ashwath narayan ) ವಿಧಾನಪರಿಷತ್ ಸದಸ್ಯ ಶಶೀಲ್ ನಮೋಶಿ, ವಿ.ಟಿ.ಯು ಕುಲಪತಿ ಡಾ: ಕರಿಸಿದ್ದಪ್ಪ, ಬಾಷ್‌ನ ಭಾರತೀಯ ವಿಭಾಗದ ವ್ಯವಸ್ಥಾಪಕ ನಿರ್ದೇಶಕ ದತ್ತಾತ್ರೇಯ ಸಾಲಗಾಮೆ ಮೊದಲಾದವರು ಉಪಸ್ಥಿತರಿದ್ದರು.