ಕನ್ನಡ ಸಿನೆಮಾದ ಖ್ಯಾತ ಪೋಷಕ ನಟ ಬ್ಯಾಂಕ್ ಜನಾರ್ಧನ್ ಗೆ ಹೃದಯಾಘಾತ – ಐಸಿಯೂನಲ್ಲಿ ಚಿಕಿತ್ಸೆ­ – vishwanews24

Featured, ರಾಜ್ಯ ನ್ಯೂಸ್

ಕನ್ನಡ ಸಿನೆಮಾದ ಖ್ಯಾತ ಪೋಷಕ ನಟ ಬ್ಯಾಂಕ್ ಜನಾರ್ಧನ್ ಗೆ ಹೃದಯಾಘಾತ – ಐಸಿಯೂನಲ್ಲಿ ಚಿಕಿತ್ಸೆ­

ಬೆಂಗಳೂರು: ಕನ್ನಡದ ಸಿನೆಮಾ ರಂಗದ ಖ್ಯಾತ ಪೋಷಕ ನಟ ಬ್ಯಾಂಕ್ ಜನಾರ್ಧನ್ ಹೃದಯಾಘಾತವಾಗಿದ್ದು, ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬ್ಯಾಂಕ್ ಜನಾರ್ದನ್​ಗೆ 74 ವರ್ಷ ವಯಸ್ಸಾಗಿದೆ. ನಿನ್ನೆ ಸಂಜೆ ಬ್ಯಾಂಕ್ ಜನಾರ್ಧನ್ ಅವರಿಗೆ ಹೃದಯಾಘಾತ ಉಂಟಾಗಿದೆ. ಸದ್ಯ ನಟ ಬ್ಯಾಂಕ್​ ಜನಾರ್ದನ್​ ಅವರಿಗೆ ಐಸಿಯೂನಲ್ಲಿ ಚಿಕಿತ್ಸೆ ನೀಡಲಾಗ್ತಿದ್ದು, ನಾಳೆ ಜನಾರ್ಧನ್ ಅವರಿಗೆ ಆಂಜಿಯೋಗ್ರಾಮ್ ಮಾಡುವ ಸಾಧ್ಯತೆ ಇದೆ. ಬ್ಯಾಂಕ್ ಜನಾರ್ದನ್ ರಂಗಭೂಮಿ ಕಲಾವಿದರಾಗಿ ಹೆಸರು ಮಾಡಿದ್ದರು. ಬಳಿಕ ಹಲವು ಕನ್ನಡ ಚಲನಚಿತ್ರಗಳು ಮತ್ತು ಟಿವಿ ಸೀರಿಯಲ್​ನಲ್ಲಿ ಹಾಸ್ಯ ನಟನಾಗಿ ನಟಿಸಿ ಜನಪ್ರಿಯರಾಗಿದ್ದಾರೆ.

ತಂದೆಯ ಆರೋಗ್ಯದ ಕುರಿತು ಮಾಹಿತಿ ನೀಡಿರುವ ಬ್ಯಾಂಕ್ ಜನಾರ್ದನ್ ಪುತ್ರ ಗುರುಪ್ರಸಾದ್ ಹೆದರುವ ಅಗತ್ಯವಿಲ್ಲ ಎಂದಿದ್ದಾರೆ. ಬ್ಯಾಂಕ್ ಜನಾರ್ದನ್ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅವರು ಆರೋಗ್ಯವಾಗಿದ್ದಾರೆ. ಸದ್ಯ ಅವರಿಗೆ ಆಂಜಿಯೋಗ್ರಾಮ್ ಮಾಡಲಾಗುತ್ತಿದೆ ಎಂದಿದ್ದಾರೆ.

Leave a Reply