ಕನ್ನಡ ಸೀರಿಯಲ್ ನಲ್ಲಿ ದೈವಾರಾಧನೆ ದೃಶ್ಯ : ಧಾರ್ಮಿಕ ಆಚರಣೆಗೆ ಧಕ್ಕೆ ; ಕರಾವಳಿಯಲ್ಲಿ ದೈವಾರಾಧಕರ ಆಕ್ರೋಶ – Vishwanews24

Featured, ದಕ್ಷಿಣ ಕನ್ನಡ

ಕನ್ನಡ ಸೀರಿಯಲ್ ನಲ್ಲಿ ದೈವಾರಾಧನೆ ದೃಶ್ಯ : ಧಾರ್ಮಿಕ ಆಚರಣೆಗೆ ಧಕ್ಕೆ ; ಕರಾವಳಿಯಲ್ಲಿ ದೈವಾರಾಧಕರ ಆಕ್ರೋಶ – Vishwanews24

ಮಂಗಳೂರು: ಇತ್ತೀಚೀನ ದಿನಗಳಲ್ಲಿ ತುಳುನಾಡಿನ ಜನರು ನಂಬುವಂತಹ ದೈವರಾಧನೆ ಸಿನಿಮಾಗಳಲ್ಲಿ ಬರುತ್ತಿದ್ದು, ಇದೀಗ ಕನ್ನಡ ಸೀರಿಯಲ್ ನಲ್ಲೂ ಬಂದಿರುವ ಕಾರಣ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ.

ಇದೀಗ ಕನ್ನಡ ಖಾಸಗಿ ವಾಹಿನಿಯೊಂದರ ಸಿರಿಯಲ್ ನಲ್ಲಿ ದೈವಾರಾಧನೆಗೆ ಸಂಬಂಧಿಸಿದಂತೆ ದೃಶ್ಯಗಳನ್ನು ಶೂಟ್ ಮಾಡಿದ್ದು, ಸ್ವತಃ ಕರಾವಳಿಯ ನಟರೊಬ್ಬರು ಅದರಲ್ಲಿ ನಟಿಸಿದ್ದು, ಇದೀಗ ಆಕ್ರೋಶಕ್ಕೆ ಕಾರಣವಾಗಿದೆ.

ಕನ್ನಡದ ಸ್ಟಾರ್ ಸುವರ್ಣದಲ್ಲಿ ಪ್ರಸಾರವಾಗುವ ಕಾವೇರಿ ಕನ್ನಡ ಮಿಡಿಯಂ ಧಾರವಾಹಿಯ ಪ್ರೋಮೋ ಒಂದು ಇದೀಗ ರೀಲಿಸ್ ಆಗಿದ್ದು, ಅದರಲ್ಲಿ ದೈವಾರಾಧನೆಯ ಕುರಿತ ವಿಡಿಯೋ ಶೂಟಿಂಗ್ ಆಗಿದ್ದು, ಇದೀಗ ವೈರಲ್ ಆಗಿದೆ. ದೈವಾರಾಧನೆ ಪ್ರದರ್ಶನ ಧಾರವಾಹಿಗೂ ವ್ಯಾಪಿಸಿದ್ದು ಕರಾವಳಿಯಲ್ಲಿ ದೈವಾರಾಧಕರ ಆಕ್ರೋಶ ಭುಗಿಲೆದ್ದಿದೆ. ದಿನೇ ದಿನೇ ತುಳುನಾಡು ವಿಶಿಷ್ಟ, ಧಾರ್ಮಿಕ ಆಚರಣೆಗೆ ಧಕ್ಕೆಯಾಗುತ್ತಿದೆ ಎಂದು ದೈವಾರಾಧಕರು ಅಸಮಾಧಾನ ಹೊರ ಹಾಕಿದ್ದಾರೆ.

ಸಿರಿಯಲ್ ನಲ್ಲಿ ದೈವಾರಾಧನೆ ಪ್ರದರ್ಶನ ಬೆನ್ನಲ್ಲೇ ದೈವಾರಾಧಕರು ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ದೈವದ ಪಾತ್ರ ನಿರ್ವಹಿಸಿದ ಕಲಾವಿದನ ವಿರುದ್ಧ ಆಕ್ರೋಶ ಭುಗಿಲೆದ್ದಿದೆ. ಧಾರವಾಹಿಯ ಪ್ರೋಮೋ ವಿಡಿಯೋ ವೈರಲ್ ಬೆನ್ನಲ್ಲೇ ದೈವಾರಾಧಕರು ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಈ ಬಗ್ಗೆ ಮಂಗಳೂರಿನ ತುಳುನಾಡ ದೈವಾರಾಧನೆ ಸಂರಕ್ಷಣಾ ಯುವ ವೇದಿಕೆ ಮಂಗಳೂರು ನಗರ ಪೊಲೀಸ್ ಕಮಿಷನರ್ ಹಾಗು ಪಾಂಡೇಶ್ವರ ಪೊಲೀಸ್ ಠಾಣೆಗೆ ದೂರು ನೀಡಿದೆ.

ನನ್ನ ಮೇಲೆ ನೂರು ಎಫ್ಐಆರ್ ಹಾಕಿದರೂ ಕೂಡಾ ಹೆದರುವುದಿಲ್ಲ : ಕೆ.ಎಸ್ ಈಶ್ವರಪ್ಪ – Vishwanews24

ದೈವಾರಾಧನೆ ನಮ್ಮ ಸಮಾಜದ ಕರ್ತವ್ಯ. ಸೀಮಿತ ಸಮಾಜದವರು ಮಾತ್ರ ದೈವ ನರ್ತನ ಮಾಡಬೇಕು. ಈಗ ಚದ್ಮವೇಷದಂತೆ ಪ್ರತಿಯೊಬ್ಬರು ವೇಷ ಹಾಕಿಕೊಂಡು‌ ಹಣ ಮಾಡುತ್ತಿದ್ದಾರೆ. ಈ ರೀತಿಯ ಘಟನೆಗಳಿಂದ ದೈವಾರಾಧನೆಗೆ ಅಪಮಾನ ಮಾಡಲಾಗುತ್ತಿದೆ. ಸಾಂಪ್ರದಾಯಿಕವಾಗಿ ದೈವ ನರ್ತನ ಸೇವೆ ನಡೆಯುವಲ್ಲಿಯೇ ಅದು ನಡೆಯಬೇಕು. ಸಿನಿಮಾ, ಧಾರವಾಹಿ, ವೇದಿಕೆಗಳಲ್ಲಿ ದೈವಾರಾಧನೆ ಪ್ರದರ್ಶನ ಸಲ್ಲದು. ನಾವು ಆ ರೀತಿಯ ಪ್ರದರ್ಶನಗಳಿಗೆ ಅವಕಾಶ ನೀಡೋದಿಲ್ಲ. ಇದರ ವಿರುದ್ಧ ನಾವು ಹೋರಾಟ ನಡೆಸುತ್ತೇವೆ. ಸಿನಿಮಾ, ಧಾರವಾಹಿ ಯಾವುದರಲ್ಲೂ ದೈವಾರಾಧನೆಯನ್ನ ಬಳಸಿಕೊಳ್ಳಬಾರದು. ಇದು ನಮ್ಮ ಜನಾಂಗೀಯ ನಿಂದನೆ. ಮುಂದೆ ಇದರ ವಿರುದ್ಧ ಕಾನೂನಾತ್ಮಕ ಹೋರಾಟವನ್ನ ನಡೆಸುತ್ತೇವೆ ಎಂದು ದೈವಾರಾಧಕರು ಎಚ್ಚರಿಕೆ ನೀಡಿದ್ದಾರೆ.

ಬಾಲಿವುಡ್‌ ಹಿರಿಯ ನಟ ಮಿಥುನ್ ಚಕ್ರವರ್ತಿಗೆ ಎದೆನೋವು – ಆಸ್ಪತ್ರೆಗೆ ದಾಖಲು  – Vishwanews24

Leave a Reply